Advertisement
ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಹಸಿರು ಭೂಮಿ ಪ್ರತಿಷ್ಠಾನ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿ ಕೊಂಡಿದ್ದ ಕಾರ್ಯಕ್ರಮಕ್ಕೆ ವಿವಿಧ ಜನವರ್ಗಗಳು ಸ್ಪಂದಿಸಿದ್ದರಿಂದ ಕಾರ್ಯಕ್ರಮವು ವಿಶಿಷ್ಟವಾಗಿ ಮೂಡಿಬಂದಿತು.
Related Articles
Advertisement
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ತಿಮ್ಮಣ್ಣಚಾರ್ ಪ್ರತಿಜ್ಞಾಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ. ಕೇವಲ ವಿಶ್ವ ಭೂಮಿ ದಿನದಂದು ಖಾಸಗಿ ವಾಹನಗಳಿಗೆ ರಜೆ ನೀಡಿ ಎಂಬ ಆಚರಣೆಯನ್ನು ಸೀಮಿತಗೊಳಿಸದೇ ಇದೊಂದು ನಿರಂತರವಾಗಿ ಚಳವಳಿಯ ರೂಪದಲ್ಲಿ ನಡೆಯಬೇಕು. ಎಲ್ಲಾ ರೀತಿಯ ಪರಿಸರ ಮಾಲಿನ್ಯ ತಡೆಗೆ ಸರ್ಕಾರಿ ಇಲಾಖೆ, ಸಂಘ ಸಂಸ್ಥೆಗಳು ಕೈ ಜೋಡಿಸಿ ಶ್ರಮಿಸಬೇಕು ಎಂದು ಹೇಳಿದರು.
ಜಿ.ಪಂ ಸಿಇಒ ಕೆ.ಎನ್.ವಿಜಯ್ ಪ್ರಕಾಶ್ ಮಾತನಾಡಿ, ಜಲಾಮೃತ ಸೇರಿದಂತೆ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಮೂಲಕ ಹಲವು ರೀತಿಯ ಜಲ ಮರುಪೂರಣ ಜಲ ಸಂರಕ್ಷಣೆ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು. ವಿವಿಧ ನ್ಯಾಯಾಧೀಶರು, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.
ಗಮನ ಸೆಳೆದ ಮೆರವಣಿಗೆ: ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ಸೈಕಲ್ಗಳು ಹಾಗೂ ಕುದುರೆಗಳು ವಿಶೇಷ ಆಕರ್ಷಣೆಯಾಗಿದ್ದವು. ಜೊತೆಗೆ ನೂರಾರು ಮಂದಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಪರಿಸರ ಕಾಳಜಿಯನ್ನು ಪ್ರದರ್ಶಿಸಿದ್ದು ವಿಶೇಷವಾಗಿತ್ತು.
ಕಾಲ್ನಡಿಗೆಯಲ್ಲಿ ಕಚೇರಿಗೆ ಬಂದ ಡೀಸಿ, ಸಿಇಒ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಕೆ.ಎನ್. ವಿಜಯ್ ಪ್ರಕಾಶ್, ಉಪವಿಭಾಗಾಧಿ ಕಾರಿ ಎಚ್.ಎಲ್ ನಾಗರಾಜ್, ಜಿಲ್ಲಾ ಪಂಚಾ ಯಿತಿಯ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಗೌಡ, ಮತ್ತಿತರರು ಇಂದು ಕಾಲ್ನಡಿಗೆಯಲ್ಲಿ ತಮ್ಮ ಕಚೇರಿಗೆ ಆಗಮಿಸಿ ಗಮನ ಸೆಳೆದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸವಿತಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಜಿಲ್ಲಾ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಆನಂದ್ ಕುಮಾರ್, ಪಿಎಂಜಿಎಸ್‌ವೈ ವಿಭಾಗದ ಕಾರ್ಯ ಪಾಲಕ ಅಭಿಯಂತರ ವಾತ್ಸಲ್ಯ, ಉದ್ಯೋಗ ವಿನಿಮಯಾಧಿಕಾರಿ ಜಯಲಕ್ಷ್ಮೀ, ಜಿಲ್ಲಾ ವಾರ್ತಾ ಧಿಕಾರಿ ವಿನೋದ್‌ಚಂದ್ರ ಮತ್ತಿತರರು ಹಾಜರಿದ್ದರು.