Advertisement

ಜಿಲ್ಲಾ ಪ್ರಮುಖರೊಂದಿಗೆ ಜಾವಡೇಕರ್‌ ಸಭೆ

11:55 AM Oct 09, 2017 | |

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಕುರಿತಂತೆ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಭಾನುವಾರ ಪಕ್ಷದ ಬೆಂಗಳೂರು ನಗರ ಮತ್ತು ಮಹಾನಗರ ಜಿಲ್ಲೆಗಳ ಪ್ರಮುಖರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

Advertisement

ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ನೋಂದಣಿ ಮತ್ತು ಬೂತ್‌ ಕಮಿಟಿಗಳ ರಚನೆ ಕುರಿತಂತೆ ಅಮಿತ್‌ ಶಾ ಅವರು ನೀಡಿರುವ ನಿರ್ದೇಶನದಂತೆ ಜಿಲ್ಲಾ ಘಟಕಗಳು ಏನೇನು ಕ್ರಮ ಕೈಗೊಂಡಿದೆ ಎಂಬ ಕುರಿತು ಪ್ರಮುಖರಿಂದ ಮಾಹಿತಿ ಪಡೆದ ಜಾವಡೇಕರ್‌, ಈ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸಲಹೆ ನೀಡಿದ್ದಾರೆ.

ಮತದಾರರ ಪಟ್ಟಿ ನೋಂದಣಿ ವೇಳೆ ಆಡಳಿತ ಪಕ್ಷ ಸಾಕಷ್ಟು ಅಕ್ರಮಗಳನ್ನು ಎಸಗುವ ಸಾಧ್ಯತೆ ಇದೆ. ಆದ್ದರಿಂದ ಮತದಾರರ ಪಟ್ಟಿಯ ಮೇಲೆ ಒಂದು ಕಣ್ಣಿಟ್ಟಿರಬೇಕು. ಹೊಸಬರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸುವುದರ ಜತೆಗೆ ಆ ಪಟ್ಟಿಯಲ್ಲಿ ಅನರ್ಹ ಮತದಾರರು ಇಲ್ಲದಂತೆಯೂ ಗಮನಹರಿಸಬೇಕು ಎಂದು ಜಾವಡೇಕರ್‌ ಅವರು ನಿರ್ದೇಶನ ನೀಡಿದ್ದಾರೆ.

ಬೆಂಗಳೂರು ನಗರ ಮತ್ತು ಮಹಾನಗರ ಜಿಲ್ಲೆಗಳಲ್ಲಿ ಬೂತ್‌ ಕಮಿಟಿಗಳ ರಚನೆ ಬಹುತೇಕ ಪೂರ್ಣಗೊಂಡಿದೆಯಾದರೂ ಸಮಿತಿ ಸದಸ್ಯರ ಸಂಖ್ಯೆ ಹೆಚ್ಚಿಸಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದಳಿದ ವರ್ಗದವರನ್ನು ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅದರಂತೆ ಕ್ರಮ ಕೈಗೊಳ್ಳಬೇಕು. ಜತೆಗೆ ಈ ಸಮಿತಿ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿರುವುದಾಗಿ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next