Advertisement

ಸಿಎಂಗೆ ಭೂ ಕಂಟಕ; ರಾಜ್ಯಪಾಲರ ಜತೆ ಜಾವ್ಡೇಕರ್ ರಹಸ್ಯ ಭೇಟಿ?

02:05 PM Dec 25, 2017 | Sharanya Alva |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೂ ಕಂಟಕದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಸೋಮವಾರ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ರಹಸ್ಯವಾಗಿ ಭೇಟಿಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Advertisement

ಖಾಸಗಿ ಟಿವಿ ಚಾನೆಲ್ ಗಳ ವರದಿ ಪ್ರಕಾರ, ಸಿಎಂ ಸಿದ್ದರಾಮಯ್ಯನವರು ಭೂಪಸಂದ್ರದ 6.26 ಎಕರೆ ಜಾಗ ಅಕ್ರಮ ಡಿನೋಟಿಫಿಕೇಶನ್ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ವಿಧಾನಪರಿಷತ್ ಸದಸ್ಯ ಪುಟ್ಟಸ್ವಾಮಿ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಿದೆ.

ಇದೀಗ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಟ್ಟರೆ ಏನೆಲ್ಲಾ ಪರಿಣಾಮಗಳು ಆಗಬಹುದು ಎಂಬ ಬಗ್ಗೆ ಜಾವ್ಡೇಕರ್ ಅವರು ರಹಸ್ಯವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ವರದಿ ವಿವರಿಸಿದೆ.

ಹಿಂದಿನ ಬಿಜೆಪಿ ಸರ್ಕಾರವನ್ನು ಕೂಡಾ ಅಕ್ರಮ ಡಿನೋಟಿಫಿಕೇಶನ್ ಆರೋಪದಡಿಯಲ್ಲಿಯೇ ಕೆಳಗಿಳಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಕೂಡಾ ಭೂ ಚಕ್ರದ ಸುಳಿಯಲ್ಲಿ ಸಿಲುಕಿಸಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next