Advertisement
ತ್ರಿಪುರಾ 2010 ಹಾಗೂ 2014ರಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ 10 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳನ್ನು ಶಿಕ್ಷಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ 2014ರಲ್ಲಿ ಈ ಶಿಕ್ಷಕರನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ, 2017ರಲ್ಲಿ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ವಜಾಗೊಂಡಿರುವ ಶಿಕ್ಷಕರನ್ನು ಮತ್ತೆ ಶಿಕ್ಷಕ ಹುದ್ದೆಗಳಿಗೆ ಮರು ನೇಮಕ ಮಾಡಿಕೊಳ್ಳಲು ನ್ಯಾಯಾಲಯ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ವಜಾಗೊಂಡ ಶಿಕ್ಷಕರಿಗೆ ಪರ್ಯಾಯ ಉದ್ಯೋಗ ಕಲ್ಪಿಸಲು ಶಿಕ್ಷಕೇತರ ಜವಾನ, ಶಾಲೆ ಸಹಾಯಕ, ಗುಮಾಸ್ತ, ಕಾವಲುಗಾರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ತ್ರಿಪುರಾ ಸರಕಾರವು, ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. Advertisement
ವಜಾಗೊಂಡ ಶಿಕ್ಷಕರಿಗೆ ಜವಾನ ಹುದ್ದೆ: ಸಮ್ಮತಿ ಕೊಟ್ಟ ಸುಪ್ರೀಂ
07:45 AM Aug 08, 2020 | mahesh |
Advertisement
Udayavani is now on Telegram. Click here to join our channel and stay updated with the latest news.