Advertisement

ಸಾಮಾಜಿಕ ಅಂತರವೇ ಸಂಜೀವಿನಿ: ಅಜಯಸಿಂಗ್‌

05:36 PM Apr 29, 2020 | Naveen |

ಜೇವರ್ಗಿ: ಮಹಾಮಾರಿ ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರವೇ ಸಂಜೀವಿನಿಯಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

Advertisement

ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಬಳಿ ಕಂದಾಯ, ಆರೋಗ್ಯ, ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಗುಣಮಟ್ಟದ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಸುದೀರ್ಘ‌ ಕಾಲ ಲಾಕ್‌ಡೌನ್‌ ಆಗಿದ್ದರಿಂದ ಬಡವರು, ದುರ್ಬಲರು ತೊಂದರೆಯಲ್ಲಿದ್ದಾರೆ. ಅವರ ಕಣ್ಣೀರು ಒರೆಸಿ ಬದುಕು ಸಾರ್ಥಕ ಪಡಿಸಿಕೊಳ್ಳೋಣ
ಎಂದರು. ಕೊರೊನಾಗೆ ಇಡೀ ಜಗತ್ತೇ ತಲ್ಲಣಗೊಂಡಿದೆ. ಜಗತ್ತಿನಲ್ಲಿಯೇ ಕೊರೊನಾವನ್ನು ಸಮರ್ಥವಾಗಿ ಎದುರಿಸುತ್ತಿರುವ ದೇಶಗಳಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಆರೋಗ್ಯ, ಪೊಲೀಸ್‌ ಇಲಾಖೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರು. ಇವರೆಲ್ಲ ಹಗಲಿರುಳು ತಮ್ಮ ಜೀವ ಪಣಕ್ಕಿಟ್ಟು ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಅಧಿಕಾರಿಗಳು ಸುರಕ್ಷಿತವಾಗಿದ್ದರೆ ಮಾತ್ರ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸಾಧ್ಯ. ನಾವೆಲ್ಲರೂ ಸುರಕ್ಷಿತವಾಗಿರಲು ಸಾಧ್ಯ. ಆದ್ದರಿಂದ ವಿವಿಧ ಇಲಾಖೆಗಳ
ಅಧಿಕಾರಿಗಳಿಗೆ, ಪತ್ರಕರ್ತರಿಗೆ ಮಾಸ್ಕ್ ಉಚಿತವಾಗಿ ವಿತರಿಸಲಾಗುತ್ತಿದೆ. ಇದಕ್ಕೂ ಮುನ್ನ ಸರ್ಕಾರಿ ನೌಕರರಿಗೆ ಐದು ಸಾವಿರ ಮಾಸ್ಕ್ ಹಾಗೂ 50 ಲೀಟರ್‌ ಸ್ಯಾನಿಟೈಸರ್‌,
ಬಡವರಿಗೆ 25 ಸಾವಿರ ಮಾಸ್ಕ್ ವಿತರಣೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಅ ಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಸಿದರಾಯ ಭೋಸಗಿ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ. ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಲಕ್ಷಿ¾àಶ, ಸಮಾಜ ಕಲ್ಯಾಣಾಧಿಕಾರಿ ಅಶೋಕ ನಾಯಕ, ಪಿಎಸ್‌ಐ ಮಂಜುನಾಥ ಹೂಗಾರ, ಮುಖಂಡರಾದ ಶಿವಣ್ಣ ಸಾಹು ಮಂದರವಾಡ, ಅಬ್ದುಲ್‌ ರಹೇಮಾನ್‌ ಪಟೇಲ, ನೀಲಕಂಠ ಅವುಂಟಿ, ರವಿ ಕೋಳಕೂರ, ತಿಪ್ಪಣ್ಣ ಕನಕ, ಸಂಗಮೇಶ
ಕೊಂಬಿನ್‌, ಮರೆಪ್ಪ ಸರಡಗಿ, ಸುನೀಲ ಹಳ್ಳಿ, ರಿಯಾಜ್‌ ಪಟೇಲ ಮುದಬಾಳ, ಮಹಿಮೂದ್‌ ನೂರಿ, ಶಿವುಕುಮಾರ ಕಲ್ಲಾ, ಸಲಿಂ ಕಣ್ಣಿ, ಮನೋಹರ ಕಾಮನಕೇರಿಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next