Advertisement
ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ನಿಂದ ಇಡೀ ದೇಶ ನಲುಗಿದೆ. ಇಂತಹ ಸಂದರ್ಭದಲ್ಲಿ ಮನುಕುಲದ ಉದ್ಧಾರಕ್ಕಾಗಿ ಪ್ರತಿಯೊಬ್ಬರು ಮಾನವೀಯತೆ ಮೆರೆಯಬೇಕಾಗಿದೆ. ತಾಲೂಕಿನ ನಿರ್ಗತಿಕ ಕುಟುಂಬಗಳಿಗೆ ಧರ್ಮಸಿಂಗ್ ಫೌಂಡೇಶನ್ ವತಿಯಿಂದ 42 ಗ್ರಾಪಂ ವ್ಯಾಪ್ತಿಯಲ್ಲಿ 1.35 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳ ಮುಂಜಾಗ್ರತೆಯಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಒಂದೇ ಒಂದು ಕೊರೊನಾ ಸೋಂಕು ತಗುಲಿದ ಪ್ರಕರಣ ಪತ್ತೆಯಾಗಿಲ್ಲ. ಹೊರ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಂದ ಜೇವರ್ಗಿ ತಾಲೂಕಿಗೆ 9,857 ಜನ ಬಂದಿದ್ದು, ಅದರಲ್ಲಿ 8,871 ಜನರಿಗೆ 14 ದಿವಸ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ರಾಜ್ಯ ಸರ್ಕಾರ ಜೇವರ್ಗಿ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಈಗಾಗಲೇ ಬರ ನಿರ್ವಹಣೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
Advertisement
ಸಮರ್ಪಕ ಆಹಾರ ವಿತರಿಸಿ: ಡಾ.ಅಜಯಸಿಂಗ್
05:18 PM Apr 27, 2020 | Naveen |
Advertisement
Udayavani is now on Telegram. Click here to join our channel and stay updated with the latest news.