Advertisement

ಅನ್ಯ ರಾಜ್ಯದಿಂದ ಬಂದವರ ಮೇಲೆ ನಿಗಾ ಇಡಿ

03:43 PM Apr 13, 2020 | Naveen |

ಜೇವರ್ಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿರುವ ನಿರ್ಗತಿಕರು, ಬಡವರು, ಅಲೆಮಾರಿ ಜನಾಂಗದವರು ಹಸಿವಿನಿಂದ ಬಳಲಬಾರದು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಪ್ರಮಾಣದಲ್ಲಿ ಆಹಾರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

Advertisement

ಪಟ್ಟಣದ ಮಿನಿ ವಿಧಾನಸೌಧದಲ್ಲಿ ರವಿವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊರ ರಾಜ್ಯ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ತಾಲೂಕಿಗೆ 8960 ಜನ ಬಂದಿದ್ದು, ಮಹಾರಾಷ್ಟ್ರದಿಂದ 1283, ತೆಲಂಗಾಣದಿಂದ 221, ಬೆಂಗಳೂರು ನಗರದಿಂದ 6186 ಹಾಗೂ ಇತರ ಪ್ರದೇಶಗಳಿಂದ 1270 ಜನ ಬಂದಿದ್ದಾರೆ ಎಂದು ತಿಳಿಸಿದರು.

ದೊಡ್ಡ ನಗರಗಳಿಂದ ಹಳ್ಳಿಗಳಿಗೆ ಜನರು ಬಂದರೆ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೊರೊನಾ ಸೋಂಕು ತಡೆಗಟ್ಟಲು ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.
ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದಿರುವ 8960 ಜನರಲ್ಲಿ ಈಗಾಗಲೇ 5413 ಜನರಿಗೆ 14
ದಿನಗಳ ಹೋಂ ಕ್ವಾರಂಟೈನ್‌ ಪೂರ್ಣಗೊಳಿಸಲಾಗಿದೆ.

ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿ 75631 ಕುಟುಂಬಗಳು ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದಾರೆ. ಇವರಲ್ಲಿ 46079 ಕುಟುಂಬಗಳಿಗೆ ನ್ಯಾಯ ಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸಲಾಗಿದೆ ಎಂದು ಹೇಳಿದರು.

ತಹಶೀಲ್ದಾರ್‌ ಸಿದರಾಯ ಭೋಸಗಿ, ಯಡ್ರಾಮಿ ತಹಶೀಲ್ದಾರ್‌ ಬಸಲಿಂಗಪ್ಪ ನಾಯ್ಕೋಡಿ, ತಾಪಂ ಇಒ ವಿಲಾಸರಾಜ, ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಜವಳಗಿ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ. ಪಾಟೀಲ, ಸಿಡಿಪಿಒ ಶಿವಪ್ರಕಾಶ ಹಿರೇಮಠ, ಸಿಪಿಐ ರಮೇಶ ರೊಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next