Advertisement

350 ಹಾಸಿಗೆಗಳ ಜಯದೇವ ಆಸ್ಪತ್ರೆ ಇಂದು ಲೋಕಾರ್ಪಣೆ

10:53 AM Nov 17, 2021 | Team Udayavani |

ಬೆಂಗಳೂರು: ನಗರದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಇನ್ಫೊಸಿಸ್‌ ಫೌಂಡೇಷನ್‌ ವತಿಯಿಂದ ನಿರ್ಮಿಸಿರುವ 350 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯು ಬುಧವಾರ ಲೋಕಾರ್ಪಣೆಗೊಳ್ಳುತ್ತಿದೆ.

Advertisement

ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಇನ್ಫೋಸಿಸ್‌ ಸಂಸ್ಥಾಪಕ ಎನ್‌. ಆರ್‌.ನಾರಾಯಣ ಮೂರ್ತಿ, ಇನ್ಫೋಸಿಸ್‌ ಫೌಂಡೇ ಷನ್‌ ಅಧ್ಯಕ್ಷೆ ಸುಧಾ ಮೂರ್ತಿ, ಸಂಸದ ತೇಜಸ್ವಿ ಸೂರ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:- ಲೈಂಗಿಕ ದೌರ್ಜನ್ಯ; ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು, ಭೌತಶಾಸ್ತ್ರ ಶಿಕ್ಷಕನ ಬಂಧನ

ಶಾಸಕಿ ಸೌಮ್ಯರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರು, ಆರೋಗ್ಯ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ಸಿಂಗ್‌, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಪಾಲ್ಗೊಳ್ಳಲಿದ್ದಾರೆ.

ವಿಶೇಷತೆಗಳು:- 

Advertisement

 ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಂದ ಆಸ್ಪತ್ರೆ ನಿರ್ಮಾಣಕ್ಕೆ ದೇಣಿಗೆ

 36 ಗುಂಟೆ ವಿಸ್ತೀರ್ಣದಲ್ಲಿ 20 ತಿಂಗಳ ಕಾಮಗಾರಿ, ಅತ್ಯುತ್ತಮ ಕಟ್ಟಡ ನಿರ್ಮಾಣ

 ಈಗಿರುವ ಆಸ್ಪತ್ರೆಗೂ ಹೊಸದಾಗಿ ನಿರ್ಮಿಸಿರುವ ಆಸ್ಪತ್ರೆಗೂ ಸಂಪರ್ಕ ಸೇತುವೆ ನಿರ್ಮಿಸಲಾಗಿದೆ.

 ಹೊಸ ಆಸ್ಪತ್ರೆ ಹಾಸಿಗೆಗಳು ಸೇರಿ ಒಟ್ಟಾರೆ 1,750 ಹಾಸಿಗೆಗಳನ್ನು ಹೊಂದುವ ಮೂಲಕ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ ಜಯದೇವ ಹೃದ್ರೋಗ ಸಂಸ್ಥೆ ಪಾತ್ರ.

 ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆವರೆಗೂ ತುರ್ತು/ಗಂಭೀರ ಚಿಕಿತ್ಸೆಗೆ ಪ್ರತಿ ಐದು ನಿಮಿಷಕ್ಕೊಬ್ಬ ರೋಗಿ ಬರುತ್ತಿದ್ದು, ಐಸಿಯು ಹಾಸಿಗೆಗಳ ಅವಶ್ಯಕತೆ ಹೆಚ್ಚಿತ್ತು. ಹೊಸ ಕಟ್ಟಡ ಹಾಸಿಗೆ ಸಮಸ್ಯೆಗೆ ಪರಿಹಾರ ನೀಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next