Advertisement
ಉಡುಪಿಯಲ್ಲಿ ಪತ್ರಕರ್ತರೊಂದಿಗೆ ಮಾತಧಿನಾಡಿದ ಅವರು, ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ, ಮಾಜಿ ಸಚಿವ ಅಂಬರೀಷ್ ಹಾಗೂ ಇತರ ಪ್ರಮುಖರು ಬಿಜೆಪಿಗೆ ಸೇರ್ಪಡೆಧಿಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಬೆಳವಣಿಗೆಗಳು ನಡೆಯುತ್ತಿವೆ ಎಂದರು.
ರಾಜ್ಯಾದ್ಯಂತ ಕುಡಿಯುವ ನೀರಿನ ಕೊರತೆ ಎದುರಾಗುತ್ತಿದ್ದು, ಎಲ್ಲಿಯೂ ಸಮಸ್ಯೆಗಳಾಗದಂತೆ ಕೇಂದ್ರದಿಂದ ಹೆಚ್ಚುವರಿ ಹಣ ಬಿಡುಗಡೆ ಮಾಡಧಿಲಾಗಿದೆ. ಈ ಮೊದಲು 219 ಕೋ. ರೂ. ನೀಡಧಿಲಾಗಿತ್ತು. ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಹಣ ಕೇಳಿದ್ದು, ನಾನು ಮಾತನಾಡಿ ಈಗ 419 ಕೋ. ರೂ. ಹಣ ಬಿಡುಗಡೆ ಮಾಡಲಾಗಿದೆ. ಬರ ಸಮಸ್ಯೆ ಪರಿಹಾರಕ್ಕೆ ಈಗಾಗಲೇ ಕೇಂದ್ರದಿಂದ 1,782 ಕೋ. ರೂ. ನೀಡಲಾಗಿದೆ ಎಂದು ಹೇಳಿದರು.