ಚಿಕ್ಕಮಗಳೂರು: ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಜಯಪ್ರಕಾಶ್ ಹೆಗ್ಡೆಯವರು ಹಿಂದೆ ಸಂಸದರಾಗಿ ಮಾಡಿದ ಅಭಿವೃದ್ಧಿ ಕಾರ್ಯ
ಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರನ್ನು ಮತ್ತೊಮ್ಮೆ ಸಂಸದರನ್ನಾಗಿ ಮಾಡುವಂತೆ ಶಾಸಕ ಎಚ್.ಡಿ. ತಮ್ಮಯ್ಯ ಮನವಿ ಮಾಡಿದರು.
Advertisement
ಮಂಗಳವಾರ ನಗರದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮನೆ-ಮನೆಗೆ ಕರಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದುಳಿದ ದೀನದಲಿತರ, ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್ ಅನ್ನು ಬೆಂಬಲಿಸುವಂತೆ ತಿಳಿಸಿದರು.
ಮನೆಗಳಿಗೆ ನೀಡಿ ಮತ ನೀಡುವಂತೆ ಮನವರಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ
ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಡುಗಡೆ ಮಾಡಿರುವ
ಚುನಾ ವಣಾ ಪ್ರಣಾಳಿಕೆಯಾಗಿ 5 ನ್ಯಾಯಗಳಾದ ಯುವನ್ಯಾಯ, ರೈತನ್ಯಾಯ, ಪಾಲು ದಾರಿಕೆ ನ್ಯಾಯ, ಮಹಿಳಾ ನ್ಯಾಯ,
ಶ್ರಮಿಕ ನ್ಯಾಯ ಇವುಗಳ ಗ್ಯಾರಂಟಿ ಕಾರ್ಡನ್ನು ಮತದಾರರಿಗೆ ನೀಡಿ ಮತ ಕೇಳುತ್ತೇವೆಂದು ತಿಳಿಸಿದರು. ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳದೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮಹಿಳೆಯರನ್ನು ಅಪಮಾನಿಸುವ ಕೆಲಸ ಮಾಡಿದ್ದಾರೆ. ಅವರ ಹೇಳಿಕೆ ಖಂಡನೀಯ ಎಂದರು.
Related Articles
Advertisement
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಗೌಡ, ಡಾ| ಡಿ.ಎಲ್. ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ನಗರಸಭೆ ಸದಸ್ಯರಾದ ಲಕ್ಷ್ಮಣ, ಮಂಜುಳಾ ಲಕ್ಷ್ಮಣ, ಸಿ.ಪಿ. ಲಕ್ಷ್ಮಣ, ಕಾವ್ಯ ಇದ್ದರು.