Advertisement

ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಗೆ ಎಡಗೈ ವೇಗಿ ಜಯದೇವ್ ಉನಾದ್ಕತ್

06:45 PM Dec 10, 2022 | Team Udayavani |

ಮುಂಬೈ: ಎಡಗೈ ವೇಗಿ ಜಯದೇವ್ ಉನಾದ್ಕತ್ ಅವರನ್ನು ಬಾಂಗ್ಲಾದೇಶದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಭಾರತ ತಂಡಕ್ಕೆ ಕರೆಸಿಕೊಳ್ಳಲಾಗಿದೆ.

Advertisement

ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸೌರಾಷ್ಟ್ರ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಉನಾದ್ಕತ್ ಅವರು ಬಾಂಗ್ಲಾ ಸರಣಿಗೆ ಮೊಹಮ್ಮದ್ ಶಮಿಯ ಸ್ಥಾನದಲ್ಲಿ ಆಯ್ಕೆಯಾಗಿದ್ದಾರೆ, ಇತ್ತೀಚೆಗೆ ಬೌಲಿಂಗ್ ತೋಳಿನ ಒತ್ತಡದಿಂದಾಗಿ ಶಮಿ ಬಾಂಗ್ಲಾ ಪ್ರವಾಸದಿಂದ ಹೊರಗುಳಿದಿದ್ದಾರೆ.

31 ವರ್ಷ ವಯಸ್ಸಿನ ಎಡಗೈ ವೇಗಿ ಉನಾದ್ಕತ್ 2010 ರಲ್ಲಿ ಸೆಂಚುರಿಯನ್‌ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಏಕೈಕ ಟೆಸ್ಟ್ ಆಡಿದ್ದರು. ಅಲ್ಲಿಂದೀಚೆಗೆ, ಅವರು ಏಳು ಏಕದಿನ ಮತ್ತು 10 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ಬಾಂಗ್ಲಾದೇಶದಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳನ್ನು ಆಡಲು ಸಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next