Advertisement

ಕೇಂದ್ರದ ಕೆಲವು ಧೋರಣೆಗಳಿಂದ ಪ್ರಾದೇಶಿಕತೆಗೆ ಧಕ್ಕೆ: ಜೆ.ಸಿ.ಮಾಧುಸ್ವಾಮಿ

09:52 PM Mar 27, 2021 | Team Udayavani |

ಮೈಸೂರು: ಕೇಂದ್ರ ಸರ್ಕಾರ ಕೆಲವು ಧೋರಣೆಗಳು ಪ್ರಾದೇಶಿಕತೆಗೆ ಧಕ್ಕೆಯಾಗುತ್ತಿದ್ದು, ಇದರಿಂದ ಒಕ್ಕೂಟ ವ್ಯವಸ್ಥೆ ಸಡಿಲವಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಮ್ಮದೇ ಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ನಗರ ಘಟಕದಿಂದ ಬಿ.ಎಸ್‌.ಸಿದ್ದಲಿಂಗಶೆಟ್ಟರ ದತ್ತಿ, ಸಿದ್ದಮ್ಮಣ್ಣಿ ಸಿದ್ದಲಿಂಗಶೆಟ್ಟರ ದತ್ತಿ, ಸಿದ್ದನಂಜಪ್ಪ ದತ್ತಿ, ಶಾಂತಾದೇವಿ ಸಿದ್ದನಂಜಪ್ಪ ದತ್ತಿಯಿಂದ ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ ವಿಷಯದ ಬಗ್ಗೆ ಶನಿವಾರ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಕೇಂದ್ರ ಸರ್ಕಾರದ ಕೇಂದ್ರೀಕರಣ ಧೋರಣೆಯಿಂದ ದೇಶದಲ್ಲಿ ಪ್ರಾದೇಶಿಕತೆ ಕಾವು ಹೆಚ್ಚಾಗುತ್ತಿದೆ. ರಾಜ್ಯದ ಪಟ್ಟಿಯಲ್ಲಿರುವ ಇಲಾಖೆಗಳು ನಿಧಾನವಾಗಿ ಕೇಂದ್ರದ ವಶವಾಗುತ್ತಿದ್ದು, ಎಲ್ಲವೂ ವಿಕೇಂದ್ರೀಕರಣ ಆಗುವ ಬದಲು ಕೇಂದ್ರೀಕರಣವಾಗುತ್ತಿದೆ. ಸರ್ವಾಧಿಕಾರಿ ಧೋರಣೆಯಿಂದ ಎಂದಿಗೂ ಪ್ರಾದೇಶಿಕ ಸ್ವಾತಂತ್ರ್ಯಕ್ಕೆ ಒಳಿತಾಗುವುದಿಲ್ಲ. ಅಲ್ಲದೆ, ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳು ಉತ್ತಮ ಪರಿಸ್ಥಿತಿಯಲ್ಲಿರುವವರಿಗೆ ಮತ್ತಷ್ಟು ಸೌಲಭ್ಯಗಳನ್ನು ನೀಡುವಂತಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಬಂದಾಗ 16 ರಾಜ್ಯಗಳಿದ್ದವು. ಆದರೆ, ಈಗ 29 ರಾಜ್ಯಗಳಿವೆ. ಎಲ್ಲ ರಾಜ್ಯಗಳಲ್ಲಿಯೂ ಅಭಿವೃದ್ಧಿ ಒಂದೆರಡು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವ ಕಾರಣ ಮಿಕ್ಕ ಜಿಲ್ಲೆಗಳು ಬೇರೆ ರಾಜ್ಯ ಕೇಳುತ್ತಿವೆ. ಉತ್ತರ ಕರ್ನಾಟಕ ವಿಚಾರದಲ್ಲಿಯೂ ಇದೇ ಆಗಿದೆ, ತೆಲಂಗಾಣ ರಾಜ್ಯ ಸೃಷ್ಟಿಯಾಗಲೂ ಇದೇ ಕಾರಣ ಎಂದು ಹೇಳಿದರು.

ಇದನ್ನೂ ಓದಿ :5ನೇ ವಿಡಿಯೋ ರಿಲೀಸ್ : ಪ್ರಕರಣ ಬೇರೆ ಕಡೆ ತಿರುಗಿಸುತ್ತಿದ್ದಾರೆ ಎಂದು ಆರೋಪಿಸಿದ ಯುವತಿ  

ಕೇಂದ್ರ ಸರ್ಕಾರ ಮನೆಯ ಹಿರಿಯ ಸದಸ್ಯನಂತೆ ವರ್ತಿಸಬೇಕು. ಆದರೆ, ಲಭ್ಯ ಸಂಪನ್ಮೂಲ ಹಂಚಿಕೆ ಮಾಡುವಲ್ಲಿ ವಿಫ‌ಲವಾಗಿದೆ. ಇದೆಲ್ಲ ದೆಹಲಿಯ ಪ್ರಭುಗಳಿಗೆ ಅರ್ಥವಾಗುತ್ತಿಲ್ಲ. ಒಕ್ಕೂಟ ವ್ಯವಸ್ಥೆಗೂ ಶಕ್ತಿ ತುಂಬುವಲ್ಲಿ ಕೂಡ ಸೋತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

Advertisement

ಎಂಎಲ್‌ಸಿ ಎನ್‌.ರವಿಕುಮಾರ್‌, ಸಂಸದ ತೇಜಸ್ವಿ ಸೂರ್ಯ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next