Advertisement
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ 59 ನೇ ಹುಟ್ಟುಹಬ್ಬ ಆಚರಿಸಿಕೊಂಡ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಬಡವರ ಕಲ್ಯಾಣಕ್ಕಾಗಿ ನಾನು ಕಂಡಿರುವ ಕನಸು ನನಸು ಮಾಡಲು ಜೆಡಿಎಸ್ ಪಕ್ಷಕ್ಕೆ ಮತದಾರರು ಮುಂದಿನ ಚುನಾವಣೆಯಲ್ಲಿ ಆರ್ಶೀವದಿಸಬೇಕು ಎಂದು ಹೇಳಿದರು.
Related Articles
Advertisement
ಯಾವುದೇ ಕಾರಣಕ್ಕೂ ನಿಖೀಲ… ರಾಜಕೀಯಕ್ಕೆ ಬರೋ ಪ್ರಶ್ನೆಯೇ ಇಲ್ಲ. ಆದರೆ ಪಕ್ಷದ ಪ್ರಚಾರದಲ್ಲಿ ಭಾಗವಹಿಸುತ್ತಾನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಸದ ಪುಟ್ಟರಾಜು, ಮಾಜಿ ಸಚಿವರಾದ ಎಚ್.ವಿಶ್ವನಾಥ್, ಪಿ.ಜಿ.ಆರ್.ಸಿಂದ್ಯಾ, ಬಂಡೆಪ್ಪ ಕಾಶಂಪುರ್, ಶಾಸಕರಾದ ಗೋಪಾಲಯ್ಯ, ಸುರೇಶ್‌ಬಾಬು, ವಿಧಾನಪರಿಷತ್ ಸದಸ್ಯರಾದ ರಮೇಶ್‌ಬಾಬು, ಟಿ.ಎ.ಶರವಣ, ಕಾಂತರಾಜ್, ಮುಖಂಡರಾದ ಬಿ.ಎಂ.ಫರೂಕ್, ಜಫ್ರುಲ್ಲಾ ಖಾನ್, ರಮೇಶ್‌ಗೌಡ, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ವಿಶೇಷ ಪೂಜೆಹುಟ್ಟುಹಬ್ಬ ಪ್ರಯುಕ್ತ ರಾಜರಾಜೇಶ್ವರಿನಗರ ದೇವಾಲಯದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ನಂತರ ಪದ್ಮನಾಭನಗರದಲ್ಲಿ ದೇವೇಗೌಡರ ಆರ್ಶೀವಾದ ಪಡೆದು ವಿಕಲಚೇತನರ ಜತೆ ಹುಟ್ಟುಹಬ್ಬ ಆಚರಿಸಿಕೊಂಡರು.ಆದಿಚುಂಚನಗಿರಿ ಮಠಕ್ಕೆ ತೆರಳಿ ನಿರ್ಮಲಾನಂದನಾಥ ಸ್ವಾಮಿಗಳ ಆರ್ಶೀವಾದ ಪಡೆದರು. ನಂತರ ಪಕ್ಷದ ಕಚೇರಿಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಉಸ್ತುವಾರಿಯ “ಅಪ್ಪಾಜಿ ಕ್ಯಾಂಟೀನ್’ಗೆ ಚಾಲನೆ ನೀಡಿದರು. ಸಂಜೆ ಬಿಡದಿ ಬಳಿಯ ಕೋತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಕ್ಷೇತ್ರ ರಾಮನಗರಕ್ಕೂ ಭೇಟಿ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು. 58 ವರ್ಷ ತುಂಬಿ 59 ನೇ ವರ್ಷಕ್ಕೆ ಕಾಲಿಟ್ಟಿರುವ ಕುಮಾರಸ್ವಾಮಿಯವರಿಗೆ ತಾಯಿ ರಾಜರಾಜೇಶ್ವರಿ ಆರೋಗ್ಯ ಕೊಡಲಿ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ಮತದಾರರು ಆರ್ಶೀವಾದ ಮಾಡಲಿ.
– ಅನಿತಾ ಕುಮಾರಸ್ವಾಮಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ 124 ದಿನಗಳಷ್ಟೇ ಬಾಕಿ ಮುಂದಿನ ದಿನಗಳಲ್ಲಿ ಕುಮಾರಣ್ಣನ ಸರ್ಕಾರ ಬರಲಿದೆ. ಎಲ್ಲರ ಸಂಕಷ್ಟ ಬಗೆಹರಿಯಲಿದೆ.ರೈತರ ಸಾಲ ಮನ್ನಾ, 70 ವರ್ಷ ಮೆಲ್ಪಟ್ಟವರಿಗೆ 5 ಸಾವಿರ ರೂ. ಮಾಶಾಸನ, ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಸೇರಿ ಸಾಕಷ್ಟು ಕಾರ್ಯಕ್ರಮ ರೂಪಿಸುವ ಕನಸು ಹೊಂದಿದ್ದಾರೆ. ನಾನು ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡಲ್ಲ, ಎರಡೂ ರಾಷ್ಟ್ರೀಯ ಪಕ್ಷಗಳು ಈ ನಾಡಿಗೆ ಏನು ಕೊಟ್ಟಿವೆ ಎಂಬುದು ಎಲ್ಲರಿಗೂ ಗೊತ್ತಿದೆ.
- ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ