Advertisement

ರಾಜಕಾಲುವೆ ಒತ್ತುವರಿ ತೆರವಿಗೆಆಗ್ರಹಿಸಿ ಜೆಡಿಯು ಪ್ರತಿಭಟನೆ

03:01 PM Sep 14, 2017 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಜೆಡಿಯು ಕಾರ್ಯಕರ್ತರು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ರಾಜಕಾಲುವೆ ಒತ್ತುವರಿಯಿಂದಾಗಿ ಮಳೆ ಬಂದಾಗ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ತಕ್ಷಣ ಒತ್ತುವರಿ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಗರದಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ಕಳಪೆ ಕಾಮಗಾರಿಯಿಂದ ಯಾವ ರಸ್ತೆಗಳಲ್ಲೂ ಸಂಚಾರ ಮಾಡದಂಥ ಸ್ಥಿತಿ ನಿರ್ಮಾಣವಾಗಿದೆ. ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಸಮರ್ಪಕ ತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಗಮನಹರಿ  ಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಡೆಂಘೀ, ಚಿಕೂನ್‌ಗುನ್ಯಾ ರೋಗಗಳಿಗೆ 27 ಜನರು ಇದುವರೆಗೂ ಬಲಿಯಾಗಿದ್ದು ಮಾರಣಾಂತಿಕ ಸೊಳ್ಳೆಗಳ ನಿಯಂತ್ರಣಕ್ಕೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಮುಖಂಡರಾದ ನಾಗೆಶ್‌, ಪಾಲಾಕ್ಷ, ವೆಂಕಟಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next