Advertisement

ಸರ್ಕಾರದ ವಿರುದ್ಧ ಹೋರಾಟಕ್ಕೆ ಜೆಡಿಎಲ್‌ಪಿ ನಿರ್ಧಾರ

10:46 PM Feb 17, 2020 | Lakshmi GovindaRaj |

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್‌ವಸತಿ ಕಲ್ಪಿಸುವಲ್ಲಿನ ಲೋಪ, ಶಾಸಕರ ಆನುದಾನ ಕಡಿತ, ಸಮ್ಮಿಶ್ರ ಸರ್ಕಾರದ ಯೋಜನೆಗಳ ಜಾರಿಯಲ್ಲಿನ ಅಸಡ್ಡೆ ವಿರೋಧಿಸಿ ಅಧಿವೇಶನದಲ್ಲಿ ಹೋರಾಟ ನಡೆಸಲು ಜೆಡಿಎಸ್‌ ಶಾಸಕಾಂಗ ಪಕ್ಷ ಸಭೆ ನಿರ್ಧರಿಸಿದೆ.

Advertisement

ವಿಧಾನಸೌಧದಲ್ಲಿ ಸೋಮವಾರ ಬೆಳಗ್ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರ ಸ್ವಾಮಿ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ, ಸಮಯ ಸಿಕ್ಕಾಗ ಪ್ರಸ್ತಾಪ ಮಾಡೋಣ. ಉಭಯ ಸದನಗಳಲ್ಲಿ ಸದಸ್ಯರು ಕಡ್ಡಾಯವಾಗಿ ಎಲ್ಲ ದಿನ ಹಾಜರಿರಬೇಕು.

ತಮ್ಮ ತಮ್ಮ ಭಾಗದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಿರಿ ಎಂದು ಎಚ್‌.ಡಿ.ಕುಮಾರ ಸ್ವಾಮಿ ಸೂಚಿಸಿದರು. ಸಭೆ ಬಳಿಕ ಮಾತನಾಡಿದ ಟಿ.ಎ.ಶರವಣ, ಅಧಿವೇಶದನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಏನೆಲ್ಲಾ ಕಾರ್ಯತಂತ್ರ ರೂಪಿಸಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next