Advertisement
ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು, ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತು. ಮಾಜಿ ಸಚಿವ ಬಿ.ಬಿ. ನಿಂಗಯ್ಯ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಕಚೇರಿ ಗಾಂಧಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಕಾರ್ಯಕರ್ತರ ಸಭೆಗೆ ಜಿಲ್ಲಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಗೈರಾಗಿದ್ದರು. ಅವರು ಕೋರ್ಟ್‌ಗೆ ಹಾಜರಾಗಬೇಕಿರುವ ಹಿನ್ನೆಲೆಯಲ್ಲಿ ಸಭೆಗೆ ಬಂದಿಲ್ಲ. ಹಲವು ಹೋರಾಟ ನಡೆಸಿದ್ದಾರೆ. ಪಕ್ಷದ ಸಂಘಟನೆ ಮಾಡುತ್ತಿದ್ದಾರೆ ಎಂದು ತೀರ್ಥಹಳ್ಳಿಯ ಸುಂದರೇಶ್ ತಿಳಿಸಿದರು.
ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಕಾಂತರಾಜು ಅವರು, ಮಂಜುನಾಥ ಗೌಡ ಅವರಿಂದಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ. ಅ ಧಿಕಾರ ಇದ್ದಾಗ ಇದ್ದರು. ಅಧಿ ಕಾರ ಹೋದ ಮರುದಿನದಿಂದ ಈ ಕಡೆ ಬಂದಿಲ್ಲ ಎಂದರು. ಕಾಂತರಾಜು ಅವರೊಂದಿಗೆ ಹಲವರು ಧ್ವನಿಗೂಡಿಸಿದರು. ಮಧ್ಯ ಪ್ರವೇಶಿಸಿದ ಶ್ರೀಕಾಂತ್ ಅವರು, ಮಂಜುನಾಥಗೌಡ ಅವರು ತೀರ್ಥಹಳ್ಳಿಯಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಆದರೆ ಅವರು ಜಿಲ್ಲಾ ಮಟ್ಟದಲ್ಲಿ ಸಂಘಟನೆ ಮಾಡಬೇಕು ಎಂದು ಎಲ್ಲರನ್ನೂ ಸಮಾಧಾನಪಡಿಸಿದರು.
ಜಿಪಂ ಸದಸ್ಯ ಮಣಿಶೇಖರ್ ಮಾತನಾಡಿದರು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಡಿ.ಯಶೋಧರ, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು. ವೀಕ್ಷಕರ ಸಮಿತಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಗೈರಾಗಿದ್ದರು.