Advertisement

JDS-BJP Alliance; ರಾಜ್ಯಸಭಾ ಅಖಾಡಕ್ಕೆ ಕುಪೇಂದ್ರ ರೆಡ್ಡಿ?

01:02 AM Feb 13, 2024 | Team Udayavani |

ಬೆಂಗಳೂರು: ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆ ಅಖಾಡಕ್ಕೆ ಇಳಿಯುವುದಕ್ಕೆ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಉತ್ಸಾಹ ತೋರಿದ್ದು, ಇನ್ನೆರಡು ದಿನಗಳಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಒಂದೊಮ್ಮೆ ರೆಡ್ಡಿ ಕಣಕ್ಕೆ ಇಳಿದರೆ ಚುನಾವಣೆ ಕಣ ರಂಗೇರಲಿದೆ.

Advertisement

ಲೆಕ್ಕಾಚಾರದ ಪ್ರಕಾರ ಬಿಜೆಪಿ ಒಂದು ಸ್ಥಾನವನ್ನು ಪಡೆಯುವುದು ನಿಶ್ಚಿತವಾಗಿದ್ದು, ಅಭ್ಯರ್ಥಿ ಹೆಸರನ್ನು ವರಿಷ್ಠರೇ ಪ್ರಕಟಿಸಿದ್ದಾರೆ. ಒಂದು ಸ್ಥಾನಕ್ಕೆ 46 ಮತ ನಿಗದಿಗೊಳಿಸಿದರೆ ಬಿಜೆಪಿಯಲ್ಲಿ ಮೊದಲ ಪ್ರಾಶಸ್ತ್ಯದ 20 ಮತಗಳು ಉಳಿಯುತ್ತವೆ. ಜೆಡಿಎಸ್‌ನ 19 ಮತಗಳ ಜತೆಗೆ ಜನಾರ್ದನ ರೆಡ್ಡಿ ಕೈ ಜೋಡಿಸಿದರೆ 40 ಮತ ಗಳಿಸಬಹುದು. ಆದರೆ ಕೊರತೆ ಮತಗಳನ್ನು ಹೇಗೆ ತುಂಬಿಕೊಳ್ಳುತ್ತಾರೆಂಬ ಪ್ರಶ್ನೆ ಉದ್ಭವವಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ನಿಂದ ಯಾರೊಬ್ಬ ಸದಸ್ಯರೂ ಅಡ್ಡಮತದಾನ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ ನಾನು ಎಲ್ಲವನ್ನೂ ನಿಭಾಯಿಸುತ್ತೇನೆ ಎಂದು ಕುಪೇಂದ್ರ ರೆಡ್ಡಿ ಅವರು ಎಚ್‌.ಡಿ.ಕುಮಾರಸ್ವಾಮಿ ಅವರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿಯೇ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next