Advertisement

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

12:00 AM Apr 20, 2024 | Team Udayavani |

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಜೆಡಿಎಸ್‌ ಬಿಜೆಪಿಯ ಬಿ’ ಟೀಮ್‌ ಎಂದು ಕಾಂಗ್ರೆಸ್‌ ನವರು ಕರೆಯುತ್ತಾರೆ. ಹೌದು ನಾವು ಬಿಜೆಪಿಯ ಬಿ’ ಟೀಮ್‌ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಬಹಿರಂಗ ಸಭೆಯಲ್ಲಿ ಒಪ್ಪಿಕೊಂಡರು.

Advertisement

ಜಿಲ್ಲೆಯ ಶಿಡ್ಲಘಟ್ಟ ಹಾಗೂ ಚಿಂತಾಮಣಿ ತಾಲೂಕಿನ ಗಡಿ ಭಾಗದಲ್ಲಿ ಶುಕ್ರವಾರ ಲೋಕಸಭಾ ಕ್ಷೇತ್ರದ ಮೀಸಲು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಪರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವಂತೆ ಮನವಿ ಮಾಡಿದರು. ಲೋಕಸಭಾ ಚುನಾವಣೆ ಮುಗಿದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next