Advertisement
ಬಿಜೆಪಿ ಕಾರ್ಯಕಾರಿಣಿ ಚುನಾವಣೆ ಬಗ್ಗೆ ಚರ್ಚೆಎಪ್ರಿಲ್-ಮೇ ತಿಂಗಳಲ್ಲಿ ನಡೆಯಬಹುದಾದ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತಯಾರಿ ಆರಂಭಿಸಿದೆ. ಈ ಮಧ್ಯೆ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ವಿಧಾನಸಭೆ ಹೊಸ್ತಿಲಲ್ಲೇ ಈ ಸಭೆ ಮಹತ್ವ ಪಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ,ಜಗದೀಶ್ ಶೆಟ್ಟರ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಜ್ಯ ಸಂಘಟನ ಕಾರ್ಯದರ್ಶಿ ರಾಜೇಶ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ರಾಜ್ಯ ಕಾಂಗ್ರೆಸ್‌ನಲ್ಲಿಯೂ ಸಿದ್ಧತೆ ಬಿರುಸುಗೊಂಡಿದ್ದು,ಮಹಿಳೆಯರ “ನಾ ನಾಯಕಿ’ ಸಮಾವೇಶಕ್ಕಾಗಿ ಸೋಮವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಆಗಮಿಸಲಿದ್ದಾರೆ. ಇದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಮಹಿಳೆಯರನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಸೋಮವಾರ ಅರಮನೆ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದೆ.
Related Articles
Advertisement
ಬೆಳಗ್ಗೆ 11ಕ್ಕೆ ಸಮಾವೇಶ ನಡೆಯಲಿದ್ದು, ಪ್ರಿಯಾಂಕಾ ಗಾಂಧಿ ಅವರ ಜತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುಜೇìವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಾ ಅಮರನಾಥ್, ಮಾಜಿ ಸಚಿವೆ ಉಮಾಶ್ರೀ, ರಾಣಿ ಸತೀಶ್, ಲಕ್ಷ್ಮೀ ಹೆಬಾಳ್ಕರ್, ಸೌಮ್ಯಾ ರೆಡ್ಡಿ ಸೇರಿದಂತೆ ಮಹಿಳಾ ಘಟಕಗಳ ಪದಾಧಿಕಾರಿಗಳು ಹಾಲಿ, ಮಾಜಿ ಶಾಸಕಿಯರು ಭಾಗವಹಿಸಲಿದ್ದಾರೆ.
ಕುಮಾರಸ್ವಾಮಿಯಿಂದ ರೈತರಿಗಾಗಿ ರೈತ ಸಂಕ್ರಾಂತಿಜೆಡಿಎಸ್ನಲ್ಲಿಯೂ ಸಿದ್ಧತೆ ಬಲವಾಗಿದೆ. ರೈತರ ಸಮಗ್ರ ಸಶಕ್ತೀಕರಣಕ್ಕಾಗಿ ಪಂಚರತ್ನ ಯೋಜನೆಗಳಲ್ಲಿ “ರೈತ ಚೈತನ್ಯ’ ಕಾರ್ಯಕ್ರಮವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರೂಪಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೃಷಿ ಸಮಸ್ಯೆಗಳ ಬಗ್ಗೆ ರೈತರ ಜತೆ ಮುಕ್ತವಾಗಿ ಚರ್ಚಿಸಲು ಸೋಮವಾರ “ರೈತ ಸಂಕ್ರಾಂತಿ’ ಆನ್‌ಲೈನ್ ಸಂವಾದ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಸಂವಾದದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂದೇಶ ನೀಡಲಿದ್ದು, ಚರ್ಚೆಯನ್ನು ಅವರೂ ಆಲಿಸಲಿದ್ದಾರೆ ಎಂದಿದ್ದಾರೆ. ಬಿಡದಿಯ ನನ್ನ ತೋಟದಲ್ಲಿ ರೈತ ಸಂಕ್ರಾಂತಿ ಸಂವಾದ ಹಮ್ಮಿಕೊಳ್ಳಲಾಗಿದೆ. ಅಪರಾಹ್ನ 3.30ರಿಂದ ಸಂಜೆ 5 ಗಂಟೆಯವರೆಗೆ ಸುಮಾರು 50ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳ ರೈತರ ಜತೆ ಆನ್‌ಲೈನ್ ವೇದಿಕೆ ಮೂಲಕ ನೇರ ಸಂವಾದ ನಡೆಸುತ್ತೇನೆ. ಯಾವುದೇ ಭಾಗದ ರೈತರು ಈ ಸಂವಾದದಲ್ಲಿ ಭಾಗಿಯಾಗಬಹುದು ಹಾಗೂ ಸಮಸ್ಯೆಗಳು, ಪರಿಹಾರಗಳನ್ನು ತಿಳಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.