Advertisement

ಜೆಡಿಎಸ್‌ ಬಿಜೆಪಿ ಒಳ ಒಪ್ಪಂದ

01:32 PM May 03, 2018 | |

ದೇವನಹಳ್ಳಿ: ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯ ಇಲ್ಲ. ಹೀಗಾಗಿ ಜೆಡಿಎಸ್‌ ಜೊತೆ ಒಳ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ವೀರಪ್ಪಮೊಯ್ಲಿ ಆರೋಪಿಸಿದರು.

Advertisement

ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ಅಣ್ಣೇಶ್ವರ ಗ್ರಾಪಂ ಅಧ್ಯಕ್ಷೆ ಹಾಗೂ ಸದಸ್ಯರು ಹಾಗೂ ಜೆಡಿಎಸ್‌ ಜಿಲ್ಲಾ ಹಿರಿಯ ಉಪಾಧ್ಯಕ್ಷ, ತಾಪಂ ಮಾಜಿ ಅಧ್ಯಕ್ಷ ಸೇರಿದಂತೆ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

ಹೊಂದಾಣಿಕೆ ರಾಜಕೀಯ: ಜೆಡಿಎಸ್‌ ಮತ್ತು ಬಿಜೆಪಿ ಬಿ ತಂಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಹೇಳಿರುವುದು ಸರಿ ಯಾಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಹೊಂದಾಣಿಕೆ ರಾಜಕಾರಣ ಮಾಡಲು ಹೊರಟಿದ್ದಾರೆ. ಬಿಜೆಪಿ ಬಂಡವಾಳ ಜನರಿಗೆ ತಿಳಿದಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷದಲ್ಲಿ ಮಾಡಿರುವ ಸಾಧನೆ ಶೂನ್ಯವಾಗಿದೆ ಎಂದು ಟೀಕಿಸಿದರು. 

ಭಿನ್ನಾಭಿಪ್ರಾಯಗಳಿಲ್ಲ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷದಲ್ಲಿ 58 ಸಾವಿರ ಕೋಟಿ ರೂ. ನೀರಿಗಾಗಿ ಖರ್ಚುಮಾಡಿದೆ. ಆದರೆ ಬಿಜೆಪಿ ಸರ್ಕಾರ ಇದ್ದ ವೇಳೆ 16 ಸಾವಿರ ಕೋಟಿ ರೂ. ಮಾತ್ರ ಖರ್ಚು ಮಾಡಿತ್ತು. ಪ್ರಣಾಳಿಕೆಯಲ್ಲಿ ನೀರಾವರಿ ಅನುಷ್ಠಾನಕ್ಕಾಗಿ 1.25ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ದೇವನಹಳ್ಳಿ ನಗ ರಕ್ಕೆ ಕಾವೇರಿ ನೀರು ಬರುವಂತೆ ಒತ್ತಾಯ ವಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿ ನೀರು ಇರುವುದರಿಂದ ಸರಬರಾಜು ಮಾಡಲು ತೀರ್ಮಾನಿಸಲಾಗುವುದು. ಚಿಕ್ಕ ಬಳ್ಳಾಪುರ ಲೋಕಸಭಾ ಕ್ಷೇತ್ರದ 8 ತಾಲೂಕುಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪಕ್ಷದಲ್ಲಿದ್ದ ಎಲ್ಲಾ ಭಿನ್ನಾಭಿಪ್ರಾಯ ಸರಿಪಡಿಸಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟಸ್ವಾಮಿ ಹೆಚ್ಚು ಬಹು ಮತದಿಂದ ಶಾಸಕರಾಗಿ ಆಯ್ಕೆಗೊಳ್ಳುತ್ತಾರೆ ಎಂದು ನುಡಿದರು.

ಹಾರೋಹಳ್ಳಿ ಗ್ರಾಪಂ ಸದಸ್ಯ ಬುಳ್ಳಹಳ್ಳಿ ರಾಜಪ್ಪ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು ಮಾತನಾಡಿ, ಈ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಲ್ಲಿ ಹೊರಗಿನ ವ್ಯಕ್ತಿಗೆ ಅಭ್ಯರ್ಥಿಯನ್ನಾಗಿ ಮಾಡಿರುವುದನ್ನು ತಿರಸ್ಕರಿಸಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇವೆ ಎಂದರು. 

Advertisement

ಅಣ್ಣೇಶ್ವರ ಗ್ರಾಪಂ ಸದಸ್ಯ ಸಿ.ಮುನಿರಾಜು ಮಾತನಾಡಿ, ಶಾಸಕ ಪಿಳ್ಳಮುನಿಶಾಮಪ್ಪ ಅವರನ್ನು ಬಿಟ್ಟು ಹೊರಗಿನ ವ್ಯಕ್ತಿಗೆ ಟಿಕೆಟ್‌ ನೀಡಿದ್ದರಿಂದ ಬೇಸತ್ತು ಪಕ್ಷ ತೊರೆಯಲಾಗಿದೆ. ಅಣ್ಣೇಶ್ವರ ಗ್ರಾಪಂನ ಅಧ್ಯಕ್ಷೆ ಲಕ್ಷ್ಮೀ ಮುರಳಿ ನೇತೃತ್ವದಲ್ಲಿ 8 ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.

ಸೇರ್ಪಡೆ: ಇದೇ ಸಂದರ್ಭದಲ್ಲಿ ಜೆಡಿಎಸ್‌ಜಿಲ್ಲಾ ಹಿರಿಯ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ಅಣ್ಣೇಶ್ವರ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಮುರಳಿ, ಗ್ರಾಪಂ ಸದಸ್ಯರಾದ ಸಿ.ಮುನಿ ರಾಜು, ದೇವಿಕಾ, ಕವಿತಾ, ಪಾರ್ವತಮ್ಮ, ಅನಿತಾ, ದೀಪಾ, ತಾಪಂ ಮಾಜಿ ಅಧ್ಯಕ್ಷ ಉಗನವಾಡಿ ಮಂಜುನಾಥ್‌, ವಿಎಸ್‌ಎಸ್‌ ಎನ್‌ ಅಧ್ಯಕ್ಷ ಎ.ಎಂ.ವೆಂಕಟೇಶಪ್ಪ, ಮುಖಂಡ ಭೂವನಹಳ್ಳಿ ಸುನೀಲ್‌, ವೆಂಕಟೇಶ್‌, ಶ್ರೀನಿವಾಸ್‌, ಕಾಂತರಾಜು ಮತ್ತಿತ ರರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟಸ್ವಾಮಿ, ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿಶಾಮಪ್ಪ, ಪ್ರಧಾನ ಕಾರ್ಯದರ್ಶಿ ಎ.ಚಂದ್ರಶೇಖರ್‌, ಪ್ರಸನ್ನ ಕುಮಾರ್‌, ಕೆಪಿಸಿಸಿ ಸದಸ್ಯ ಚೇತನ್‌ಗೌಡ, ಜಿಪಂ ಉಪಾಧ್ಯಕ್ಷ ಅನಂತಕುಮಾರಿ, ಸದಸ್ಯ
ಕೆ.ಸಿ.ಮಂಜುನಾಥ್‌, ರಾಧಮ್ಮ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಾರುತಿ, ಉಪಾಧ್ಯಕ್ಷ ಎಸ್‌.ಜಿ.ಮಂಜುನಾಥ್‌, ಪ್ರಧಾನ
ಕಾರ್ಯದರ್ಶಿ ಎಸ್‌.ಪಿ.ಮುನಿರಾಜು, ಜಿಲ್ಲಾ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷ ಎಂ.ಲೋಕೇಶ್‌, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಅಪ್ಪಣ್ಣ, ಖಾದಿಬೋರ್ಡ್‌ ಮಾಜಿ ಅಧ್ಯಕ್ಷ ಪಟಾಲಪ್ಪ, ಭೂ ಮಂಜೂರಾತಿ ಸದಸ್ಯ ಸೋಮಶೇಖರ್‌, ಭೂ ನ್ಯಾಯ ಮಂಡಳಿ ಸದಸ್ಯ ಎನ್‌.ರಘು ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next