Advertisement

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

09:41 PM Jul 02, 2024 | Team Udayavani |

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಯಾರು ಎಂಬ ಜಿಜ್ಞಾಸೆ ತಾರ್ಕಿಕ ಅಂತ್ಯಕ್ಕೆ ಬಂದಿದ್ದು ಜು.4ರಂದು ಚನ್ನಪಟ್ಟಣ ಜೆಡಿಎಸ್‌ ಪ್ರಮುಖರ ಸಭೆ ಕರೆದು ಅಭ್ಯರ್ಥಿ ಅಖೈರು ಗೊಳಿಸುವುದಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮನ್ನು ಭೇಟಿ ಮಾಡಿದ್ದ ಸಿ.ಪಿ.ಯೋಗೇಶ್ವರ್‌ಗೆ ತಿಳಿಸಿದ್ದಾಗಿ ತಿಳಿದು ಬಂದಿದೆ.

Advertisement

ಜು.5ರಂದು ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಮಯದಲ್ಲಿ ಬಿಡುವು ಮಾಡಿಕೊಂಡು ಚನ್ನಪಟ್ಟಣದ ಜೆಡಿಎಸ್‌ ಪ್ರಮುಖರನ್ನು ಕರೆಸಿ ಉಪಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

 

Advertisement

Udayavani is now on Telegram. Click here to join our channel and stay updated with the latest news.

Next