Advertisement
ಸಿದ್ದರಾಮಯ್ಯ ಮತ್ತು ವಿಶ್ವನಾಥ್ ನಡುವಿನ ವಾಗ್ವಾದ ಮತ್ತು ಟ್ವೀಟ್ ಸಮರ ಕುರಿತು ರಾಜ ಕೀಯ ವಲಯಗಳಲ್ಲಿ ನಾನಾ ರೀತಿಯ ವಾಖ್ಯಾನ ಗಳಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಸಹ ಮಧ್ಯಪ್ರವೇಶಿಸಿ ಮನವಿ ಮಾಡಿದ್ದು, ಟ್ವೀಟ್ ಮೂಲಕವೇ ವಿವಾದಕ್ಕೆ ತೆರೆ ಬಿದ್ದಿದೆ.
Related Articles
Advertisement
ಸಮ್ಮಿಶ್ರ ಸರಕಾರದ ಸಿಎಂ ಆಗಿ ಕುಮಾರ ಸ್ವಾಮಿಯವರು ಇದ್ದಾರೆ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಅಪ್ರಸ್ತುತ ಎಂದು ಈ ಕುರಿತಾಗಿನ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಜತೆಗೆ, ನನ್ನ ಯಾವ ಕಾರ್ಯಕ್ರಮವೂ ಹೆಸರು ಪಡೆದುಕೊಳ್ಳಲು ಮಾಡಿದ ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ… ಇವುಗಳನ್ನು ಯಾವುದೇ ಸರಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು ಎಂದು ಟ್ವೀಟ್ ಮೂಲಕವೇ ಕುಟುಕಿದ್ದಾರೆ.
ಗೆಳೆಯ ಜಿ.ಟಿ. ದೇವೇಗೌಡ ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು.
ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ 104 ಸೀಟು ಬಂದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಅನಂತರ ಮೂರೇ ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಷ್ಟಾದರೂ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹಲವು ಬಾರಿ ಹೇಳಿದ್ದಾರೆ. ಈಗೀಗ ಇಂತಹ ಹೇಳಿಕೆಗೆ ಜನ ನಗಲು ಆರಂಭ ಮಾಡಿದ್ದಾರೆ ಎಂದು ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದ್ದಾರೆ.
ಸಿದ್ದು ಬೇಸರ, ಎಚ್‌ಡಿಕೆ ಸಮಾಧಾನಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಹುಬ್ಬಳ್ಳಿಯ ಒಂದೇ ಹೊಟೇಲ್‌ನಲ್ಲಿ ವಾಸ್ತವ್ಯ ಇದ್ದರೂ ಮುಖಾಮುಖೀ ಭೇಟಿಯಾಗಲಿಲ್ಲ, ಆದರೆ ದೂರವಾಣಿ ಮೂಲಕ ಕುಮಾರಸ್ವಾಮಿ ಜತೆ ಮಾತನಾಡಿದ ಸಿದ್ದರಾಮಯ್ಯ ತೀವ್ರ ಅಸಮಾಧಾನ ಹೊರ ಹಾಕಿದರು. ಇಂತಹ ಹೇಳಿಕೆಗಳು ನಿಮ್ಮ ರಾಜ್ಯಾಧ್ಯಕ್ಷರಿಗೆ ಶೋಭೆ ತರುತ್ತಾ? ಈಗ ಈ ರೀತಿ ಮಾತನಾಡಿರುವವರು ಇನ್ನು ಲೋಕಸಭೆ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿರಬಹುದು. ಇಂಥದ್ದು ಸರಿಯಲ್ಲ ಎಂದು ಹೇಳಿದರು. ಇದಕ್ಕೆ ಕುಮಾರಸ್ವಾಮಿಯವರು, ಬೇಸರ ಮಾಡಿಕೊಳ್ಳಬೇಡಿ, ನಾನು ಸರಿಪಡಿಸುತ್ತೇನೆ, ವಿಶ್ವನಾಥ್ ಜತೆ ಮಾತನಾಡುತ್ತೇನೆ ಎಂದು ಸಮಾಧಾನಪಡಿಸಿದರು ಎಂದು ಹೇಳಲಾಗಿದೆ. ಸಿದ್ದು ಪರ ಬ್ಯಾಟಿಂಗ್
ಇಷ್ಟೆಲ್ಲದರ ನಡುವೆಯೂ ಸಿದ್ದರಾಮಯ್ಯ ಪರ ಕಾಂಗ್ರೆಸ್‌ನ ಮಾಜಿ ಶಾಸಕರು ಬ್ಯಾಟಿಂಗ್ ಮುಂದುವರಿಸಿದ್ದಾರೆ. ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಐದು ವರ್ಷ ಗಳ ಕಾಲ ಸಿದ್ದರಾಮಯ್ಯ ಒಂದೇ ಒಂದು ಹಗರಣಕ್ಕೆ ಸಿಲುಕದೆ ಪ್ರಾಮಾಣಿಕವಾಗಿ ಆಡಳಿತ ನಡೆಸಿ¨ªಾರೆ. ಚುನಾವಣೆ ಸಮಯದಲ್ಲಿ ತಾವು ಕೊಟ್ಟ ಎಲ್ಲ ಆಶ್ವಾಸನೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಹಾಗಾಗಿ ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗಲಿ ಎಂದು ಬಯಸುವುದರಲ್ಲಿ ತಪ್ಪೇನಿಲ್ಲ. ನಮ್ಮಲ್ಲಿ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ.ಶಿವಕುಮಾರ್ ಇ¨ªಾರೆ. ಅಂತಿಮವಾಗಿ ರಾಹುಲ್ ಗಾಂಧಿ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.