Advertisement

JDS ಕೋರ್‌ ಕಮಿಟಿ ಮೊದಲ ಸಭೆ : ಆಗಸ್ಟ್‌ 20ರಿಂದ ರಾಜ್ಯ ಪ್ರವಾಸಕ್ಕೆ ನಿರ್ಧಾರ

09:42 PM Aug 18, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು ಹಾಗೂ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್‌ ಹೊಸ ಕೋರ್‌ ಕಮಿಟಿ ರಚಿಸಿದ್ದು, ಅದರ ಮೊದಲ ಸಭೆ ಶುಕ್ರವಾರ ನಡೆಯಿತು.

Advertisement

ಮಾಜಿ ಸಚಿವ ಜಿ.ಟಿ ದೇವೇಗೌಡರ ನೇತೃತ್ವದ 21ಸದಸ್ಯರ ಈ ಹೊಸ ಕೋರ್‌ ಕಮಿಟಿಯ ಸಭೆಯಲ್ಲಿ ಆಗಸ್ಟ್‌ 20ರಿಂದ ರಾಜ್ಯ ಪ್ರವಾಸ ಕೈಗೊಳ್ಳುವ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಆಗಸ್ಟ್‌ 7 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಕೋರ್‌ ಕಮಿಟಿಯ ಹೊಸ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು. ಅದರಂತೆ ಮಾಜಿ ಸಚಿವ ಜಿ.ಟಿ. ದೇವೇಗೌಡ ಕೋರ್‌ ಕಮೀಟಿಯ ಅಧ್ಯಕ್ಷರಾಗಿದ್ದು, ಮಾಜಿ ಶಾಸಕ ವೈಎಸ್‌ವಿ ದತ್ತಾ ಸಂಚಾಲಕರಾಗಿದ್ದಾರೆ ಎಂದರು.

ಆಗಸ್ಟ್‌ 20ರಿಂದ ರಾಜ್ಯ ಪ್ರವಾಸ: ಪಕ್ಷ ಸಂಘಟನೆ, ಪಕ್ಷದ ಬಲವರ್ಧನೆ. ಮುಂಬರುವ ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ, ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಆಗಸ್ಟ್‌ 20 ರಿಂದ ಸೆಪ್ಟೆಂಬರ್‌ 30ರ ವರೆಗೂ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುತ್ತದೆ. ಸೆಪ್ಟೆಂಬರ್‌ನಲ್ಲಿ ವರದಿ ನೀಡಿದ ಬಳಿಕ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂದು ಸಿ.ಎಂ ಇಬ್ರಾಹಿಂ ತಿಳಿಸಿದರು.

ಕೋರ್‌ ಕಮಿಟಿ ಸದಸ್ಯರು: ಮಾಜಿ ಸಚಿವರಾದ ಸಾ.ರಾ. ಮಹೇಶ್‌, ಬಂಡೆಪ್ಪ ಕಾಶೆಂಪುರ್‌, ಎಚ್‌.ಕೆ. ಕುಮಾರಸ್ವಾಮಿ, ವೆಂಕಟರಾವ್‌ ನಾಡಗೌಡ, ಸಿ.ಎಸ್‌. ಪುಟ್ಟರಾಜು, ಆಲ್ಕೋಡ್‌ ಹನುಮಂತಪ್ಪ, ಶಾಸಕರಾದ ನೇಮಿರಾಜ ನಾಯಕ್‌, ರಾಜೂಗೌಡ, ಬಿ.ಎಂ.ಫಾರೂಕ್‌, ಮಾಜಿ ಶಾಸಕರಾದ ಸುರೇಶ್‌ ಗೌಡ, ಕೆ.ಎಂ.ತಿಮ್ಮರಾಯಪ್ಪ ವೀರಭದ್ರಪ್ಪ ಹಾಲರವಿ, ಎಂ.ಕೃಷ್ಣಾರೆಡ್ಡಿ, ದೊಡ್ಡಪ್ಪ ಗೌಡ, ಕೆ.ಬಿ.ಪ್ರಸನ್ನ ಕುಮಾರ್‌, ಸುನೀತಾ ಚೌವ್ಹಾಣ…, ಸಿ.ವಿ.ಚಂದ್ರಶೇಖರ್‌, ಸುಧಾಕರ್‌ ಶೆಟ್ಟಿ, ಸೂರಜ್‌ ಸೋನಿ ನಾಯಕ್‌ ಸೇರಿ 21 ಸದಸ್ಯರು ಕೋರ್‌ ಕಮಿಟಿಯಲ್ಲಿ ಇದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next