Advertisement

ಜೆಡಿಎಸ್‌ ದಲಿತ ಸಮಾವೇಶ ಇಂದು

10:03 AM Dec 13, 2017 | |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ನಿಟ್ಟಿನಲ್ಲಿ ಸಮುದಾಯವಾರು ಸಮಾವೇಶಗಳಿಗೆ ಮೊರೆ ಹೋಗಿರುವ ಜೆಡಿಎಸ್‌ ತುಮಕೂರಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಸಿದ ಬೆನ್ನಲ್ಲೇ ಬುಧವಾರ ದಲಿತರ ಸಮಾವೇಶ ಆಯೋಜಿಸಿದೆ. ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯದೆಲ್ಲೆಡೆಯಿಂದ 1 ಲಕ್ಷ ಜನರನ್ನು
ಸೇರಿಸುವ ಗುರಿ ಹೊಂದಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಲಿದ್ದಾರೆ.

Advertisement

ಸಮಾವೇಶದ ಯಶಸ್ವಿಗಾಗಿ ಮಾಜಿ ಸಚಿವರಾದ ಬಿ.ಬಿ.ನಿಂಗಯ್ಯ, ಅಲ್ಕೋಡ್‌ ಹನುಮಂತಪ್ಪ, ಮಾಜಿ ಶಾಸಕ
ಡಾ| ಕೆ.ಅನ್ನದಾನಿ ಕಳೆದ ಒಂದು ತಿಂಗಳಿನಿಂದ ರಾಜ್ಯಾದ್ಯಂತ ಪೂರ್ವಭಾವಿ ಸಭೆಗಳನ್ನು ನಡೆಸಿ ಸಜ್ಜಾಗಿದ್ದಾರೆ. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯಕ್ಕೆ ಕೈಗೊಳ್ಳಲಿರುವ ಕ್ರಮಗಳು ಹಾಗೂ ಈ ಹಿಂದೆ ಅಧಿಕಾರದಲ್ಲಿದ್ದಾಗ ರೂಪಿಸಿದ ಯೋಜನೆಗಳ ಕಿರು ಹೊತ್ತಿಗೆ ಸಹ ಸಿದ್ಧಪಡಿಸಲಾಗಿದೆ. ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಘೋಷಿಸಿರುವ ಜೆಡಿಎಸ್‌, ದಲಿತ ಸಮುದಾಯದ ಅಭಿವೃದ್ಧಿ ನಿಟ್ಟಿನಲ್ಲಿ ಸಮಾವೇಶದಲ್ಲಿ ಮೂರು ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ
ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next