ಚಿಕ್ಕಬಳ್ಳಾಪುರ: ಜಿಲ್ಲೆಯ ಮೇಲೂರು ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಎಲ್ಲಾ ಹಿರಿಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಾತೀತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದೇನೆ. ದುರಾಡಳಿತ ನಡೆಸಿರುವುದು ಸಾಬೀತುಪಡಿಸಿದರೆ ರಾಜಕೀಯವಾಗಿ ನಿವೃತ್ತಿ ಘೋಷಿಸುತ್ತೇನೆ ಎಂದು ಮೇಲೂರು ಗ್ರಾಪಂ ಮಾಜಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ ಸವಾಲು ಹಾಕಿದರು.
ಜಿಲ್ಲೆಯ ಮೇಲೂರು ಗ್ರಾಪಂ ಕೇಂದ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೇಲೂರು ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಂಜುನಾಥ್ ಅವರು ಕಳೆದ ಮೂರು ವರ್ಷಗಳ ಅವಧಿಯಲ್ಲಿ ದುರಾಳಿಡಳಿತ ನಡೆದಿದೆ ಮತ್ತು ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಆರೋಪಿಸಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಸನ್ಯಾಸ್ಯತ್ವ ಸ್ವೀಕರಿಸುವರೇ?: ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ರೀತಿಯ ದುರಾಡಳಿತ ನಡೆದಿಲ್ಲ. ಒಂದು ವೇಳೆ ನಡೆದಿರುವುದನ್ನು ಸಾಬೀತುಪಡಿಸಿದರೇ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ ಕೆ.ಮಂಜುನಾಥ್ ಅವರು ರಾಜಕೀಯದಿಂದ ಸನ್ಯಾಸ್ವತ್ವ ಸ್ವೀಕರಿಸುವುರೇ ಎಂದು ಸವಾಲು ಹಾಕಿದರು.
ಸೋಲಿನ ಭೀತಿ: ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಂಜುನಾಥ್ ಅವರು ರಾಜಕೀಯ ದುರುದ್ದೇಶದಿಂದ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದು,ಯಾವುದೇ ರೀತಿಯ ಸತ್ಯಾಂಶವಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರಿಗೆ ದೊರೆಯುತ್ತಿರುವ ಜನ ಬೆಂಬಲ ನೋಡಿ ಹತಾಶರಾಗಿ ಸೋಲಿನ ಭೀತಿಯಿಂದ ರಾಜಕೀಯ ಪ್ರೇರಿತವಾಗಿ ಆರೋಪ ಮಾಡಿದ್ದಾರೆ ಎಂದು ದೂರಿದರು.
ಮಾದರಿ ಗ್ರಾಪಂ ಕಟ್ಟಡ: ಗ್ರಾಪಂನ ಕಟ್ಟಡ ನಿರ್ಮಿಸಲು ಈಗಾಗಲೇ ಮಜಿನರೇಗಾ ಯೋಜನೆ ಯಡಿ ಅನುದಾನ ಮೀಸಲಿಟ್ಟಿದ್ದೇವೆ. ಆದರೆ ಅನುದಾನದ ಕೊರತೆಯಿಂದ ಕಟ್ಟಡದ ಕಾಮಗಾರಿ ಆರಂಭಿಸಲು ಸಾಧ್ಯವಾಗಿಲ್ಲ. ಈ ಬಾರಿ ಚುನಾವಣೆಯಲ್ಲಿ ಜಯ ಸಾಧಿಸಿದ ಬಳಿಕ ರಾಜ್ಯದಲ್ಲಿಯೇ ಮಾದರಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಂಜುನಾಥ್‌ರ ಮಾತುಗಳಿಗೆ ಯಾರು ಮರುಳಾಗಬಾರದು ಎಂದರು.
ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಅಭ್ಯರ್ಥಿ ಎನ್. ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಭಾಗ್ಯಲಕ್ಷ್ಮೀ ಶಿವಕುಮಾರ್, ಗ್ರಾಪಂ ಮಾಜಿ ಸದಸ್ಯ ಬಸ್ ಶ್ರೀನಿವಾಸ್, ಬಿ.ಎಂ.ಶ್ರೀನಿವಾಸರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ವಿಷಯದಲ್ಲಿ ಸಹಭಾಗಿ ಯಾಗಿದ್ದ ಗ್ರಾಪಂ ಮಾಜಿ ಅಧ್ಯಕ್ಷ ಕೆ. ಮಂಜುನಾಥ್ ಪ್ರತಿಯೊಂದು ಸಭೆಯಲ್ಲಿ ಭಾಗವಹಿಸಿ ಕೈಗೊಂಡ ನಿರ್ಣಯಗಳಿಗೆ ಬೆಂಬಲಿಸಿ ಸಹಿ ಮಾಡಿದ್ದಾರೆ. ಅಂದುಅಭಿವೃದ್ಧಿ ವಿಷಯದಲ್ಲಿಯಾಕೆ ಆಕ್ಷೇಪಣೆಮಾಡಿಲ್ಲ.-
ಜಮುನಾ ಧರ್ಮೇಂದ್ರ, ಮೇಲೂರು ಗ್ರಾಪಂ ಮಾಜಿ ಅಧ್ಯಕ್ಷ