Advertisement

ರಾಷ್ಟ್ರೀಯ ಪಕ್ಷಗಳ ಪ್ರಭಾವದ ನಡುವೆಯೂ ಜೆಡಿಎಸ್‌ ಗಮನಾರ್ಹ ಸಾಧನೆ: ಎಚ್.ಡಿ ಕುಮಾರಸ್ವಾಮಿ

12:35 PM Dec 31, 2020 | Team Udayavani |

ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ  ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ

Advertisement

ಗ್ರಾ.ಪಂ ಚುನಾವಣಾ ಪಲಿತಾಂಶದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು  ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೂ ನನ್ನ ಬೆಂಬಲ ಸದಾ ಇರಲಿದೆ ಎಂದಿದ್ದಾರೆ.

ಇದನ್ನೂ ಓದಿ:ಹೊಸ ವರ್ಷಾಚರೆಣೆಗೆ ಬ್ರೇಕ್: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ

ಗ್ರಾ. ಪಂ ಚುನಾವಣೆಯಲ್ಲಿ ಈ ಮಟ್ಟದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯಿಂದ ಹೋರಾಟ  ಮಾಡಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ನಮ್ಮ ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ ಮತ್ತು ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ  ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ನಾನು ಆಶಿಸುತ್ತೇನೆ. ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ ಎಂದು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next