Advertisement

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

11:17 PM May 08, 2024 | Team Udayavani |

ಬೆಂಗಳೂರು: ಜೆಡಿಎಸ್‌ ಕೋರ್‌ ಕಮಿಟಿ ಸಭೆಯ ಗುರುವಾರ ನಡೆಯುಲಿದ್ದು, ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

Advertisement

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದ್ದು, ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು. ಪ್ರಕರಣದ ಬಗ್ಗೆ ಜೆಡಿಎಸ್‌ ಪ್ರತಿಭಟನೆ ತೀವ್ರಗೊಳಿಸಬೇಕು ಎಂಬ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸಭೆ ಬಳಿಕ ಜೆಡಿಎಸ್‌ ನಿಯೋಗ ರಾಜ್ಯಪಾಲರಿಗೆ ದೂರು ನೀಡಲಿದೆ ಎಂದು ಹೇಳಲಾಗಿದೆ. ಸಭೆಯಲ್ಲಿ ಕೋರ್‌ ಕಮಿಟಿ ಸದಸ್ಯರಲ್ಲದೆ, ಹಾಲಿ ಹಾಗೂ ಮಾಜಿ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ಹೇಳಿವೆ.

 

Advertisement

Udayavani is now on Telegram. Click here to join our channel and stay updated with the latest news.

Next