ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು ಅವರು ಎಂದರು.
ಇದನ್ನೂ ಓದಿ:ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಅವರು ಮುಖ್ಯಮಂತ್ರಿ ಆಗಿದ್ದಾಗ ಉದಾಸೀನದಿಂದ ಕಾಲ ಕಳೆದರು. ಈಗ ಕ್ಷೇತ್ರದ ಭೇಟಿ ಮಾಡಿ ಗೋಳಾಡುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿಗೆ ಹೋಗುವುದು ಅವರ ಗುಣ. ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆಯಾಗಲಿದ್ದಾರೆ. ಜೆಡಿಎಸ್ ನೆಲಕಚ್ಚಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು ?