ಮೈಸೂರು: ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಭಾಷಣ ತ್ಯಜಿಸುವುದಾಗಿ ಮಾಜಿ ಪ್ರಧಾನಿ ಹೆಚ್. ಡಿ. ದೇವೆಗೌಡ ಹೇಳಿಕೆಯ ಬಗ್ಗೆ ಈ ರೀತಿ ಪ್ರತಿಕ್ರಯಿಸಿದರು.
ಇದನ್ನೂ ಓದಿ:ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಧ್ರುವನಾರಾಯಣ್ ವಾಗ್ದಾಳಿ
ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡುವುದಿಲ್ಲ. ಹಿಂದೆ ಸ್ಥಳೀಯವಾಗಿ ಜೆಡಿಎಸ್ ಜೊತೆ ಮೈತ್ರಿಯಾಗಿತ್ತು. ಈಗ ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ ಎಂದರು. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶವೇ ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲೂ ಮರುಕಳಿಸುತ್ತದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಬಜೆಟ್ ಮೇಲೆ ನಿರೀಕ್ಷೆಯಿಲ್ಲ: ಈ ಸರ್ಕಾರದಿಂದ ನಾನು ಯಾವ ನಿರೀಕ್ಷೆ ಇಟ್ಟುಕೊಂಡಿಲ್ಲ. ಎಕಾನಾಮಿಕ್ ಸರ್ವೇಯಲ್ಲಿ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. ಜಿಡಿಪಿ ಗಣನೀಯವಾಗಿ ಪಾತಾಳಕ್ಕೆ ಇಳಿದಿದೆ. ಮನಮೋಹನ್ ಸಿಂಗ್ ಅವರ ಬಳಿಕ ಜಿಡಿಪಿ ಪ್ರತಿ ವರ್ಷ ಕುಸಿದಿದೆ. 2019-20 ರಲ್ಲಿ ಜಿಡಿಪಿ ಗ್ರೋತ್ 4.2% ಇತ್ತು, ಆ ವೇಳೆ ಕೊರೊನಾ ಇರಲಿಲ್ಲ. ಈ ವರ್ಷ 2020-2021 ರಲ್ಲಿ ಜಿಡಿಪಿ -7.7% ಇದೆ. ಅದನ್ನು ಮುಚ್ಚಿ ಹಾಕಲು 21-22ಕ್ಕೆ 11% ಪರ್ಸೆಂಟ್ ಆಗುತ್ತದೆ ಎನ್ನುತ್ತಿದ್ದಾರೆ. ಇದನ್ನು ಸಹ ಎಕಾನಾಮಿಕ್ ಸರ್ವೇಯಲ್ಲಿ ಸುಳ್ಳು ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಉದ್ಧವ್ ಠಾಕ್ರೆ ಮೊದಲು ಕೋವಿಡ್ ನಿಯಂತ್ರಿಸುವ ಕೆಲಸ ಮಾಡಲಿ: ಜಗದೀಶ್ ಶೆಟ್ಟರ್
ಜಿಡಿಪಿ ವಿಷಯದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ. ಬಿಜೆಪಿ ನಾಯಕರು, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರಿಗೆ ದಾರಿ ತಪ್ಪಿಸುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ನಗರ ಪ್ರದೇಶದಲ್ಲಿ 9.2% ರಷ್ಟು ಹಾಗೂ ಗ್ರಾಮೀಣ ಪ್ರದೇಶದಲ್ಲಿ 8.9% ರಷ್ಟು ನಿರುದ್ಯೋಗ ಸಮಸ್ಯೆ ಇದೆ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ 2.9% ರಷ್ಟು ಮಾತ್ರ ನಿರುದ್ಯೋಗ ಸಮಸ್ಯೆ ಇತ್ತು. ದೇಶದಲ್ಲಿ 9.5%ರಷ್ಟು ಪದವೀಧರರು, ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಕೃಷಿ ಹಾಗೂ ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಒತ್ತು ನೀಡದಿದ್ದರೆ. ದೇಶ ಅಭಿವೃದ್ಧಿಯಾಗಲು ಸಾಧ್ಯವೇ ಇಲ್ಲ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಟೀಕಿಸಿದರು.