Advertisement

ಶಿಡ್ಲಘಟ್ಟ: ಜೆಡಿಎಸ್ ಶಕ್ತಿ ಪ್ರದರ್ಶನ; ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಜನಸಾಗರ

01:39 PM Apr 19, 2022 | Team Udayavani |

ಶಿಡ್ಲಘಟ್ಟ: ರಾಜ್ಯದ ಸಮಗ್ರ ನೀರಾವರಿ ಯೋಜನೆಯನ್ನು ಜಾರಿಗೊಳಿಸುವ ಸಲುವಾಗಿ ಜೆಡಿಎಸ್ ಪಕ್ಷದಿಂದ ಆಯೋಜಿಸಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿದೆ.

Advertisement

ಶಿಡ್ಲಘಟ್ಟ ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಬಾಲಾಜಿ‌ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ, ರಾಜ್ಯ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಮತ್ತಿತರರ ಗಣ್ಯರು ಭಾಗವಹಿಸಿದರು. ಸುಮಾರು ದಿನಗಳ ನಂತರ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಉದ್ದಗಲಕ್ಕೂ ಸಹಸ್ರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

ಕಾರ್ಯಕ್ರಮದಲ್ಲಿ ಚಿಂತಾಮಣಿ ಶಾಸಕ ಜೆಕೆ ಕೃಷ್ಣರೆಡ್ಡಿ,ಮಾಜಿ ಶಾಸಕ ಕೆಪಿ ಬಚ್ಚೇಗೌಡ, ವಿಧಾ‌ನ ಪರಿಷತ್ತಿನ ಮಾಜಿ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಜೆಡಿಎಸ್ ಯುವ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್, ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಮುನೇಗೌಡ, ಶಿಡ್ಲಘಟ್ಟ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಬಂಕ್ ಮುನಿಯಪ್ಪ,ಕದಸಂಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್, ತಾದೂರು ರಘು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next