Advertisement
ಮಂಗಳವಾರ ಪಟ್ಟಣದಲ್ಲಿ ಉಪಚುನಾಣೆ ನಿಮಿತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಸಿ. ಮನಗೂಳಿ ಅವರು ಪಕ್ಷ ನಿಷ್ಠಾವಂತರು. ಅವರು ನಮ್ಮನ್ನಗಲಿದ್ದರಿಂದ ಈ ಉಪಚುನಾವಣೆ ಬಂದಿದೆ. ಈ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ, ಕುಮಾರಸ್ವಾಮಿ ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ನನ್ನ ಅಭಿಪ್ರಾಯದಂತೆ ಈ ಕ್ಷೇತ್ರದಲ್ಲಿ ಕೆಲಸ ಮಾಡಿರುವುದನ್ನು ಗುರುತಿಸುವವರು ಸಾಕಷ್ಟು ಜನರಿದ್ದಾರೆ. ನಾಮ ಪತ್ರ ಹಿಂದಕ್ಕೆ ಪಡೆಯುವ ದಿನದ ನಂತರ ಕ್ಷೇತ್ರದಲ್ಲಿ 9 ದಿನಗಳ ಕಾಲ ಉಳಿದುಕೊಂಡು ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮತದಾರರ ಮನೆಗೆ ಹೋಗಿ ಕೇಳುತ್ತೇನೆ. ಮೊಮ್ಮಗಳ ಸಮಾನವಾಗಿರುವ ನಾಜೀಯಾ ಅಂಗಡಿ ಅವರನ್ನು ಖಂಡಿತವಾಗಿ ಗೆಲ್ಲಿಸಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.
Related Articles
Advertisement
ಶಾಸಕ ದೇವಾನಂದ ಚವ್ಹಾಣ ಮಾತನಾಡಿ, ಶಾಸಕ ದಿ.ಎಂ.ಸಿ. ಮನಗೂಳಿ ಅವರು ದೇವೆಗೌಡರ ನಿಷ್ಠಾವಂತರಾಗಿದ್ದರು. ಅವರ ಅಗಲಿಕೆ ದೇವೆಗೌಡರಿಗೆ, ಕುಮಾರಸ್ವಾಮಿ ಹಾಗೂ ಪಕ್ಷದ ಎಲ್ಲರಿಗೂ ನೋವು ಉಂಟುಮಾಡಿದೆ. ಆದರೆ ಅವರ ಮಗ ಕಾಂಗ್ರೆಸ್ ಬಾಗಿಲು ತಟ್ಟಿ ಪಕ್ಷ ಸೇರ್ಪಡೆಯಾಗಿದ್ದು ಎಲ್ಲರಿಗೂ ಅಷ್ಟೇ ನೋವಾಗಿದೆ. ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಜೀಯಾ ಅಂಗಡಿ ಅವರು ಸಮರ್ಥ ವ್ಯಕ್ತಿಯಾಗಿದ್ದಾರೆ. ಅವರ ಗೆಲುವಿಗಾಗಿ ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜೀಯಾ ಅವರನ್ನು ಗೆಲ್ಲಿಸುವ ಮೂಲಕ ಪಕ್ಷ ತೊರೆದು ಬೇರೆ ಪಕ್ಷದಿಂದ ಸ್ಪರ್ಧಿಸಿದವರಿಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು.
ಪಕ್ಷದ ಅಭ್ಯರ್ಥಿ ನಾಜೀಯಾ ಅಂಗಡಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಕೆಲಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪಾತ್ರ ಹಿರಿಯದಾಗಿದೆ. ಅವರ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅನುಧಾನ ಬಿಡುಗಡೆ ಮಾಡಿದ್ದಾರೆ. ಅವರು ಕ್ಷೇತ್ರದಲ್ಲಿ ಸಂಚರಿಸಿದರೆ ಸಾಕು ಜನತೆ ಅವರ ಕಾರ್ಯಗಳನ್ನು ಮೆಚ್ಚಿ ಪಕ್ಷಕ್ಕೆ ಮತ ನೀಡಲಿದ್ದಾರೆ. ಅವರ ಹಾಗೂ ಮತದಾರರ ಆಶೀರ್ವಾದಿಂದ ನನಗೆ ಗೆಲುವು ದೊರಕಲಿದೆ. ಮತದಾರರು ಎಂದಿಗೂ ಕೈ ಬಿಡುವುದಿಲ್ಲ ಎಂದು ನನಗೆ ಆತ್ಮವಿಶ್ವಾಸವಿದೆ ಎಂದು ಹೇಳಿದರು. ಪಕ್ಷದ ಮುಖಂಡ ಜಫ್ರುಲ್ಲಾ ಅವರು ಮಾತನಾಡಿದರು.
ಶಾಸಕ ಬಂಡೆಪ್ಪ ಕಾಶಂಪೂರ, ಮಂಗಳಾದೇವಿ ಬಿರಾದಾರ, ಕೇದಾರಲಿಂಗ ಹಿರೇಮಠ, ಜೆಡಿಎಸ್ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಹಂಗರಗಿ, ಗೋಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ, ಜಿಪಂ ಮಾಜಿ ಸದಸ್ಯ ಗುರುರಾಜಗೌಡ ಪಾಟೀಲ ಚಾಂದಕವಠೆ, ಶಿವಾನಂದ ಕೋಟಾರಗಸ್ತಿ, ಅನ್ನಪೂರ್ಣ ಹೊಟಗಾರ ಸೆರಿದಂತೆ ಪಕ್ಷದ ಕಾರ್ಯಕರ್ತರು ಪತ್ರಿಕಾ ಗೋಷ್ಠಿಯಲ್ಲಿ ಇದ್ದರು.