Advertisement

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಕ್ರಮ: ಭೋಜೇಗೌಡ

07:39 AM Feb 02, 2019 | |

ಸುಬ್ರಹ್ಮಣ್ಯ: ಸಮಾಜದ ಮುಖ್ಯ ವಾಹಿನಿಯಲ್ಲಿ ಕೆಲಸ ಮಾಡುವ ಶಿಕ್ಷಕರು, ಉಪನ್ಯಾಸಕರು ತಮ್ಮ ಹಕ್ಕುಗಳಿಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದು ನೋವಿನ ಸಂಗತಿ. ಕಳೆದ 20ಕ್ಕೂ ಅಧಿಕ ವರ್ಷಗಳಿಂದ ಜಡ್ಡುಗಟ್ಟಿದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಶಿಕ್ಷಣ ಮಂತ್ರಿಯ ಜವಾಬ್ದಾರಿ ಹೊಂದಿರುವ ಮುಖ್ಯಮಂತ್ರಿಗಳು ಕಟಿಬದ್ಧರಾಗಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಎಸ್‌.ಎಲ್‌. ಭೋಜೇಗೌಡ ಹೇಳಿದರು.

Advertisement

ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಅವರು ಪದವಿಪೂರ್ವ ಕಾಲೇಜು ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆ ಆಲಿಸಿ ಅವರು ಮಾತನಾಡಿದರು.

ಶಿಕ್ಷಕರ ಪ್ರತಿನಿಧಿಯಾಗಿ ನಾನು ಶಿಕ್ಷಕರ ಹಲವಾರು ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಮುಖ್ಯಮಂತ್ರಿಗಳು ಕೂಡ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಭಡ್ತಿ ಉಪನ್ಯಾಸಕರ ಸಮಸ್ಯೆ ನಿವಾರಿಸಲಾಗಿದೆ. ಎಕ್ಸ್‌ಗ್ರೇಷಿಯಾ 200 ಮತ್ತು 400ನ್ನು ಪ್ರಾಥಮಿಕ, ಪ್ರೌಢ ಶಿಕ್ಷಕರಿಗೆ ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ನೀಡಲಾಗಿದೆ. 2 ಲಕ್ಷಕ್ಕೂ ಅಧಿಕ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ವೇತನ ತಾರತಮ್ಯ ವ್ಯವಸ್ಥೆ ಸರಿಪಡಿಸಲಾಗಿದೆ. ಪ್ರಾಂಶುಪಾಲರ ವೇತನದಲ್ಲಿ ಒಂದು ಸಾವಿರ ರೂ. ವ್ಯತ್ಯಯವಿತ್ತು. ಅದನ್ನು ಸರಿಪಡಿಸಲಾಗಿದೆ ಎಂದರು.

ಅತಿಥಿ ಉಪನ್ಯಾಸಕರಿಗೆ ಭದ್ರತೆ
ಕಾಲ್ಪನಿಕ ವೇತನದ ಬಗ್ಗೆ ಚರ್ಚೆ ನಡೆಯುತ್ತಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ,. ನೆಟ್, ಸ್ಲೆಟ್, ಪಿಎಚ್‌ಡಿ ಮಾಡಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲಾಗುವುದು. 10, 15 ವರ್ಷಗಳಿಂದ ದುಡಿಯುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಟ್ಟು ಅನಂತರ ಉಳಿದವರಿಗೆ ಹೊಸ ಆಯೋಗದ ಪ್ರಕಾರ ಮೆರಿಟ್ ಆಧಾರದಲ್ಲಿ ನೇಮಕ ಮಾಡಲಾಗುವುದು ಎಂದವರು ಹೇಳಿದರು.

Advertisement

ಪ್ರಾಂಶುಪಾಲೆ ಸಾವಿತ್ರಿ, ಉಪಪ್ರಾಂಶುಪಾಲೆ ರೇಖಾರಾಣಿ, ಪ್ರೌಢಶಾಲಾ ವಿಭಾಗ ಮುಖ್ಯಸ್ಥ ಯಶವಂತ ರೈ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯೆ ಲೕಲಾ ಜಾಕೆ ಉಪಸ್ಥಿತರಿದ್ದರು. ಉಪನ್ಯಾಸ ಸೋಮಶೇಖರ್‌ ಸ್ವಾಗತಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next