Advertisement

ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಇಂದು

11:17 PM Apr 27, 2019 | Team Udayavani |

ಬೆಂಗಳೂರು: “ಆಪರೇಷನ್‌ ಕಮಲ’ ಕಾರ್ಯಾಚರಣೆ ಸುಳಿವು ಹಿನ್ನೆಲೆಯಲ್ಲಿ ಜೆಡಿಎಸ್‌ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಭಾನುವಾರ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

Advertisement

ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ಬಿಜೆಪಿಯವರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಸೆಳೆದು ಸಮ್ಮಿಶ್ರ ಸರ್ಕಾರ ಪತನಗೊಳಿಸುವ ಕಾರ್ಯತಂತ್ರ ರೂಪಿಸಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಕರೆದಿರುವ ಸಭೆಗೆ ಆಗಮಿಸುವಂತೆ ಈಗಾಗಲೇ ಎಲ್ಲ ಶಾಸಕರು, ವಿಧಾನಪರಿಷತ್‌ ಸದಸ್ಯರಿಗೆ ಪತ್ರ ರವಾನಿಸಲಾಗಿದೆ. ಯಾವುದೇ ಆಮಿಷಕ್ಕೆ ಒಳಗಾಗದೆ ಪಕ್ಷದ ಜತೆ ಇರಿ. ಲೋಕಸಭೆ ಚುನಾವಣೆ ಫ‌ಲಿತಾಂಶ ಏನೇ ಆದರೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಬಾಧಕವಾಗುವುದಿಲ್ಲ.

ಹೀಗಾಗಿ, ಯಾರೂ ಬೇರೆ ರೀತಿಯ ಯೋಚನೆ ಮಾಡಬೇಡಿ ಎಂದು ಕಿವಿಮಾತು ಹೇಳಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next