Advertisement

ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಇಂದು

11:16 PM Feb 16, 2020 | Lakshmi GovindaRaj |

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಜೆಡಿಎಸ್‌ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧದ ಹೋರಾಟದ ರೂಪುರೇಷೆ ಕುರಿತು ಚರ್ಚೆ ನಡೆಯಲಿದೆ.

Advertisement

ಬೀದರ್‌ನ ಶಾಹಿನ್‌ ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ದೇಶದ್ರೋಹ ಪ್ರಕರಣ ಹಾಕಿರುವುದು, ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ನಡೆದ ಘಟನಾವಳಿಗಳು, ಹೊಸಪೇಟೆಯ ಮರಿಯಮ್ಮನಹಳ್ಳಿ ಕಾರು ಅಪಘಾತ ಪ್ರಕರಣ, ಶಾಸಕರ ಅನುದಾನ ಕಡಿತಗೊಳಿಸಿರುವುದು, ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೂಪಿಸಿರುವ ಯೋಜನೆಗಳನ್ನು ರದ್ದುಗೊಳಿಸಿರುವುದರ ಜತೆಗೆ ಇನ್ನು ಕೆಲವು ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಿರುವುದು ಹೋರಾಟದ ಪ್ರಮುಖ ಅಸ್ತ್ರಗಳಾಗಲಿವೆ. ಈ ವಿಷಯಗಳ ಕುರಿತು ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ರಾಜ್ಯ ಸರ್ಕಾರದ ವೈಫ‌ಲ್ಯಗಳು ಹಾಗೂ ಜನ ಎದುರಿಸುತ್ತಿ ರುವ ಸಮಸ್ಯೆಗಳ ಬಗ್ಗೆ ಅಧಿವೇಶನದ ಒಳಗೆ ಮತ್ತು ಹೊರಗೆ ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಲಾಗು ವುದು ಎಂದರು. ಅಲ್ಲದೆ, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಲಿರುವ ಭಾಷಣದ ಪ್ರಮುಖ ವಿಚಾರ ಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು. ನಾಲ್ಕೂ ದಿನ ಅಧಿವೇಶನದಲ್ಲಿ ಎಲ್ಲ ಶಾಸಕರೂ ಹಾಜರಿರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next