Advertisement
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕಾಂಗ್ರೆಸ್‌ನ್ನು ಸೋಲಿಸುವ ಒಂದೇ ಗುರಿಯಿಟ್ಟುಕೊಂಡು ಅನೇಕ ಚುನಾವಣೆಗಳಲ್ಲಿ ಜೆಡಿಎಸ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ. ಕಾಂಗ್ರೆಸ್‌ನ ಅಲ್ಪಸಂಖ್ಯಾತ ಮತಗಳನ್ನು ಸೆಳೆದು ಸೋಲಿಸಲೆಂದೇ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸುತ್ತಿದೆ. ಈಗ ನಡೆಯುತ್ತಿರುವ ಹಾನಗಲ್ಲ, ಸಿಂದಗಿ ಉಪಚುನಾವಣೆಯೂ ಇದಕ್ಕೆ ಹೊರತಾಗಿಲ್ಲ. ಕುಮಾರಸ್ವಾಮಿಯವರಿಗೆ ನಿಜವಾಗಿಯೂ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಲಿ ಎಂದು ಸವಾಲು ಹಾಕಿದರು.
Related Articles
ವಿಚಾರದಲ್ಲಿ ಮುಖ್ಯಮಂತ್ರಿಗಳ ಮೃಧುಧೋರಣೆ ಅಪಾಯಕಾರಿಯಾಗಿದೆ. ಮುಖ್ಯಮಂತ್ರಿಯವರು ಈ ವಿಚಾರವಾಗಿ ಕೂಡಲೇ ಕ್ಷಮೆಯಾಚಿಸಿ, ಹೇಳಿಕೆ ವಾಪಸ್ ಪಡೆಯಬೇಕು ಎಂದರು.
Advertisement
ಜಿಲ್ಲಾ ಕಾಂಗ್ರೆಸ್ ಇನ್‌ಟೆಕ್ ವಿಭಾಗದ ಅಧ್ಯಕ್ಷ ಕೆ.ಎಂ. ಮಂಜುನಾಥ್, ಕಾಂಗ್ರೆಸ್ ಪ್ರಮುಖರಾದ ಎಂ.ಕೆ. ಲಿಯಾಖತ್ ಅಲಿ, ಡಿ. ಶಿವಕುಮಾರ್, ಮಹ್ಮದ್ ಜಿಕ್ರಿಯಾ, ಆರ್.ಬಿ.ಝಡ್, ಬಾಷಾ, ಮಹ್ಮದ್ ಜುಬೇರ್ ಸುದ್ದಿಗೋಷ್ಠಿಯಲ್ಲಿದ್ದರು.
ಮೋದಿ ಆಡಳಿತ ವೈಫಲ್ಯಪ್ರಧಾನಿ ಮೋದಿಯವರ ಆಡಳಿತ ವೈಫಲ್ಯದಿಂದ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ಪ್ರಜೆಗಳ ಹಸಿವು ನೀಗಿಸುವಲ್ಲಿ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನೇಪಾಳಕ್ಕಿಂತಲೂ ಕಳಪೆ ಸಾಧನೆ ಮಾಡಿದೆ. ವಯಸ್ಸಿಗೆ ತಕ್ಕ ದೇಹದ ತೂಕವಿಲ್ಲದ ಮಕ್ಕಳ ಸಂಖ್ಯೆ ಭಾರತದಲ್ಲಿಯೇ ಅತ್ಯಧಿಕವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಅವರ ಹಿಂಬಾಲಕರು ಮೋದಿ ಆಡಳಿತ ವೈಫಲ್ಯವನ್ನು ಖಂಡಿಸದೇ ಮೋದಿಯನ್ನು ವಿಶ್ವಗುರು ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಹಾನಗರ ಪಾಲಿಕೆಯ ಹಿರಿಯ ಸದಸ್ಯ ಕೆ.
ಚಮನ್‌ಸಾಬ್ ಇದೇ ಸಂದರ್ಭದಲ್ಲಿ ಆರೋಪಿಸಿದರು.