ಯಕೃತ್ ಕಸಿ ಮಾಡಿಸಿಕೊಂಡಿದ್ದ ಅವರಿಗೆ ಸೋಂಕು ಕಾಣಿಸಿಕೊಂಡಿತ್ತು, ಇದರಿಂದ ಮೂತ್ರಪಿಂಡದಲ್ಲೂ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ನಗರದ ಸಿಗ್ಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಸ್ವಲ್ಪ ಚೇತರಿಸಿಕೊಂಡಿದ್ದ ಅವರು ಆ್ಯಂಬುಲೆನ್ಸ್‌ನಲ್ಲೇ ವಿಧಾನಸೌಧ ವಜ್ರಮಹೋತ್ಸವ ಸಮಾರಂಭಕ್ಕೆ ಹೋಗಿ ಬಂದಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಆ ನಂತರ ಅವರ ಆರೋಗ್ಯ ಸ್ಥಿತಿ ಉಲ್ಬಣಿಸಿದ್ದರಿಂದ ನಗರದ ಅರವಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿತ್ತು.
Advertisement
ಮೈಸೂರು ಜಿಲ್ಲೆಯ ಕೆ.ಆರ್ ತಾಲೂಕಿನ ಹೊಸೂರು ಕಲ್ಲಹಳ್ಳಿಯಲ್ಲಿ ಜನಿಸದ ಚಿಕ್ಕಮಾದು ಅವರು 1978ರಲ್ಲಿ ರಾಜಕೀಯಕ್ಕೆ ಪ್ರವೇಶ ಪಡೆದವರು. 1991ರಲ್ಲಿ ಮೊದಲ ಬಾರಿ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2007-08ರಲ್ಲಿ ಜೆಡಿಎಸ್‌ನಿಂದ ಎಂಎಲ್‌ಸಿಯಾಗಿ ಆಯ್ಕೆ, 2013ರಲ್ಲಿ ಎಚ್.ಡಿ.ಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.