Advertisement

ಒಳ ಒಪ್ಪಂದ ಕಾಂಗ್ರೆಸ್ – ಬಿಜೆಪಿ ಪಕ್ಷಗಳ ಸಂಸ್ಕೃತಿ: ಜೆಡಿಎಸ್ ಶಾಸಕ‌ ಮೇಲೂರು ರವಿಕುಮಾರ್

02:54 PM May 17, 2023 | Team Udayavani |

ಶಿಡ್ಲಘಟ್ಟ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿಗೆ ಬೆಂಬಲಿಸಿದವರಿಗೆ ಈ ಬಾರಿ ಚು‌ನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದಾರೆ ಯಾರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಶಾಸಕ ಮೇಲೂರು ಬಿ.ಎನ್. ರವಿಕುಮಾರ್ ಕಿಡಿಕಾರಿದರು.

Advertisement

ತಾಲೂಕಿನ ಮೇಲೂರು ಗ್ರಾಮದಲ್ಲಿ ತಮ್ಮ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ರೈತರ ಪಕ್ಷ ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ಫಲಿತಾಂಶದಿಂದ ಬಯಲಾಗಿದೆ ನಾವು ಬಿಜೆಪಿ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡಿಲ್ಲವೆಂದು ಪರೋಕ್ಷವಾಗಿ ಪಕ್ಷೇತರ ಅಭ್ಯರ್ಥಿ ಆಂಜಿನಪ್ಪ (ಪುಟ್ಟು) ವಿರುದ್ಧ ವಾಗ್ದಾಳಿ ನಡೆಸಿ ಒಳ ಒಪ್ಪಂದ ಏನಿದ್ದರು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಸಂಸ್ಕ್ರತಿ ಎಂದು‌ ಜರಿದರು.

ರಾಜ್ಯದಲ್ಲಿ ರೈತರ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಹುನ್ನಾರ ನಡೆಸಿದ್ದಾರೆ ಹೊರತು ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡಿಲ್ಲ ಅದು ಏನಿದ್ದರು ರಾಷ್ಟ್ರೀಯ ಪಕ್ಷಗಳ ಸಂಸ್ಕೃತಿಯೆಂದು  ಕಿಡಿಕಾರಿದರು.

ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ತತ್ವ ಸಿದ್ದಾಂತವನ್ನು ಮೈಗೂಡಿಸಿಕೊಂಡು ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ‌ ಕ್ಷೇತ್ರದಲ್ಲಿ  ನಾನು ಮಾಡಿರುವ ಸೇವೆಯನ್ನು ಪರಿಗಣಿಸಿ ಮತದಾರರು ಆಶೀರ್ವದಿಸಿದ್ದಾರೆ ಅದಕ್ಕಾಗಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ ಶಾಸಕರು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ 93 ವರ್ಷದ ಹುಟ್ಟು ಹಬ್ಬದ ಅಂಗವಾಗಿ ವಿಭಿನ್ನ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರಲ್ಲದೆ ಕ್ಷೇತ್ರದ ಪರಿಸ್ಥಿತಿ ಗೊತ್ತಿದೆ ಶಿಡ್ಲಘಟ್ಟ ನಗರವೂ ಸಹಿತ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದುಕಾಣುತ್ತಿದೆ ಅದನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು.

Advertisement

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ಮೇಲೂರು ಮಂಜುನಾಥ್,ಎಪಿಎಂಸಿ ಮಾಜಿ ಅಧ್ಯಕ್ಷ ಹುಜಗೂರು ರಾಮಯ್ಯ, ನಗರಸಭೆಯ ಮಾಜಿ ಅಧ್ಯಕ್ಷ ಜೆ.ವಿ. ಸದಾಶಿವ ಮಾತನಾಡಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ  ಲಕ್ಷ್ಮೀನಾರಾಯಣ ರೆಡ್ಡಿ, ಜೆಡಿಎಸ್ ಮುಖಂಡರಾದ ಹೆಚ್.ಎಸ್.ಫಯಾಝ್, ಬಿ.ಎನ್.ಸಚಿನ್, ತಾದೂರು ರಘು, ಮುಗಿಲಡಪಿ ನಂಜಪ್ಪ,  ಕೆ.ಎಸ್. ಮಂಜುನಾಥ್,  ಸಿ.ಎಂ. ಬಾಬು, ಎಂ.ಪಿ.ಮುಶ್ತಾಖ್ ಅಹಮದ್, ವಿಜಯ ಬಾವಾರೆಡ್ಡಿ,ಉಮರ್,ಶಿವಕುಮಾರ್, ರಮೇಶ್, ರಾಘವೇಂದ್ರ, ಹನುಮಂತಪುರ ವಿಜಯ, ನಂದಕಿಶನ್ (ನಂದು) ಮತ್ತಿತರರು ಉಪಸ್ಥಿತರಿದ್ದರು.

ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಯ ಹುದ್ದೆಗಳನ್ನು ಭರ್ತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಪ್ರಚಾರಕ್ಕಾಗಿ ಯಾವುದೇ ಕೆಲಸ ಮಾಡುವುದಿಲ್ಲ ಜನಸಾಮಾನ್ಯರಿಗಾಗಿ ರಾಜಕಾರಣ ಮಾಡುತ್ತೇನೆ ಎಂದು ಶಾಸಕರು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next