Advertisement

ಜೆಡಿಎಸ್‌ ಶಾಸಕರಿಗೆ 25 ಕೋ. ರೂ. ಆಫ‌ರ್‌

12:30 AM Feb 09, 2019 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ನೇರವಾಗಿಯೇ ಆಪರೇಷನ್‌ ಕಮಲಕ್ಕೆ ಕೈಹಾಕಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಆಡಿಯೋ ಬಿಡುಗಡೆ ಮಾಡಿ ಹೊಸ ಬಾಂಬ್‌ ಸಿಡಿಸಿದ್ದಾರೆ.

Advertisement

ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪಗುರುವಾರ ದೇವದುರ್ಗ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಕುಳಿತು ಗುರುಮಿಠ್ಕಲ್ ಜೆಡಿಎಸ್‌ ಶಾಸಕ ನಾಗನ ಗೌಡ ಕಂದಕೂರ ಅವರ ಪುತ್ರ ಶರಣ ಗೌಡ ಕಂದಕೂರ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ, 25 ಕೋ. ರೂ. , ಯಾದಗಿರಿ ಜಿಲ್ಲಾ ಉಸ್ತುವಾರಿ ಮತ್ತು ಪ್ರಮುಖ ಖಾತೆ ನೀಡಲಾಗುವುದು ಎಂದು ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು

ಬಿಜೆಪಿಗೆ ಬರಲು ಮುಂಬಯಿಗೆ ಹೋದರೆ ಅಲ್ಲಿ ಬಿ.ವೈ. ವಿಜಯೇಂದ್ರ ಅವರು ಹಣ ನೀಡುತ್ತಾರೆ ಎಂದು ಯಡಿಯೂರಪ್ಪಹೇಳಿದ್ದಾರೆ. ಯಡಿಯೂರಪ್ಪ ಅವರು ನೇರವಾಗಿ ರಾಜ್ಯದ ಸಮ್ಮಿಶ್ರ ಸರಕಾರವನ್ನು ಪತನಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾದಂತಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕುಮ್ಮಕ್ಕಿದೆ, ಪ್ರಧಾನಿ ಮೋದಿಯವರು ದ್ವಿಮುಖ ನೀತಿ ಹೊಂದಿದ್ದಾರೆ. ಪ್ರಜಾಪ್ರಭುತ್ವ ಉಳಿಸುವ ಬಗ್ಗೆ ಜನರ ಮುಂದೆ ಮಾತನಾಡುವ ಅವರ ನಿಜವಾದ ಬಣ್ಣವನ್ನು ರಾಜ್ಯ ಬಿಜೆಪಿ ನಾಯಕರೇ ಬಯಲು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ದ್ವಿಮುಖ ಬಣ್ಣದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾವಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇÊಗೌಡ ಮತ್ತು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಪ್ರಧಾನಿ ಮೋದಿಯವರು ಈಗಲಾದರೂ ತಮ್ಮ ನಿಜವಾದ ಮುಖವನ್ನು ತೋರಿಸಬೇಕು. ಬಿಜೆಪಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟಿದ್ದಾರೆ. ಇವರ ಪ್ರಯತ್ನದ ಹಿಂದೆ ಯಾರಿದ್ದಾರೆ ಎಂದು ಪ್ರಧಾನಿ ಮೋದಿ ಉತ್ತರಿಸಬೇಕು.

Advertisement

ಬಿಜೆಪಿ ನಾಯಕರು ಆಪರೇಷನ್‌ ಕಮಲ ಕಾರ್ಯಾಚರಣೆ ಬಗ್ಗೆ ದಾಖಲೆ ತೋರಿಸಿ ಎಂದು ಸವಾಲು ಹಾಕಿದ್ದರು. ಹೀಗಾಗಿ, ನಾನೇ ಶರಣ ಗೌಡ ಕಂದಕೂರ ಅವರಿಗೆ ಆಡಿಯೋ ಮಾಡಿಕೊಳ್ಳಲು ಹೇಳಿದ್ದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next