Advertisement

ಜೆಡಿಎಸ್ ಶಾಸಕರ ಸಭೆ ಇಂದು

06:21 AM Jun 04, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಗಳವಾರ ಪಕ್ಷದ ಶಾಸಕರು ಹಾಗೂ ಪರಿಷತ್‌ ಸದಸ್ಯರ ಸಭೆ ಕರೆದಿದ್ದಾರೆ. ಜೆಪಿ ನಗರದ ನಿವಾಸದಲ್ಲಿ ಸಂಜೆ ಸಭೆ ನಿಗದಿಯಾಗಿದ್ದು, ಲೋಕಸಭೆ ಚುನಾವಣೆ ಫ‌ಲಿತಾಂಶ, ಮುಂದೆ ಪಕ್ಷ ಸಂಘಟನೆ, ಆಡಳಿತ ಯಂತ್ರ ಚುರುಕುಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

Advertisement

ಮುಖ್ಯಮಂತ್ರಿಯವರು ಪಕ್ಷದ ಶಾಸಕರ ಕೈಗೆ ಸಿಗುವುದಿಲ್ಲ. ನಮ್ಮ ಕ್ಷೇತ್ರದ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಎಲ್ಲರನ್ನೂ ಕರೆದು ಚರ್ಚಿಸಿ ಇನ್ಮುಂದೆ ಸರ್ಕಾರ ಸುಸೂತ್ರವಾಗಿ ನಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ವಿಸ್ತರಣೆ ಕುರಿತು ಶಾಸಕರ ಜತೆ ಚರ್ಚಿಸುವ ಸಾಧ್ಯತೆಯಿದೆ.

ಜೆಡಿಎಸ್‌ ಕೋಟಾದಡಿ ಖಾಲಿ ಇರುವ 2 ಸ್ಥಾನ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆ ಇರುವುದು, ಸರ್ಕಾರ ಉಳಿಸಿಕೊಳ್ಳಲು ಕೆಲವು ಕ್ರಮಗಳ ಅನಿವಾರ್ಯತೆ ಬಗ್ಗೆ ಶಾಸಕರ ಜತೆ ಚರ್ಚಿಸಲಿದ್ದಾರೆ. ಜೆಡಿಎಸ್‌ ಶಾಸಕರು ಎರಡು ಸ್ಥಾನದಲ್ಲಿ ಒಂದು ಸ್ಥಾನ ಬಿಟ್ಟುಕೊಟ್ಟು ಮತ್ತೂಂದು ಜೆಡಿಎಸ್‌ನ ಶಾಸಕರಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಇದೆ. ಹೀಗಾಗಿ, ಎಲ್ಲ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next