Advertisement

ಜೆಡಿಎಸ್‌ ಬಂಡಾಯ ಶಾಸಕರಿಂದ ದಿಗ್ವಿಜಯ್‌ ಸಿಂಗ್‌ ಭೇಟಿ

02:07 AM Apr 19, 2017 | Team Udayavani |

ಬೆಂಗಳೂರು: ಕಾಂಗ್ರೆಸ್‌ ಹೊಸ್ತಿಲಲ್ಲಿರುವ ಜೆಡಿಎಸ್‌ನಿಂದ ಅಮಾನತುಗೊಂಡ ಶಾಸಕರು ಮಂಗಳವಾರ ಎಐಸಿಸಿ ದಿಗ್ವಿಜಯ್‌ಸಿಂಗ್‌ ಭೇಟಿ ಮಾಡಿ ಸುದೀರ್ಘ‌ ಸಮಾಲೋಚನೆ ನಡೆಸಿದ್ದು, ಮೇ ತಿಂಗಳಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ದಿಗ್ವಿಜಯ್‌ ಸಿಂಗ್‌ ಅವರನ್ನು ಭೇಟಿ ಮಾಡಿದ್ದ ಜಮೀರ್‌ ಅಹಮದ್‌, ಚೆಲುವರಾಯಸ್ವಾಮಿ, ಭೀಮಾನಾಯಕ್‌ ಅವರನ್ನೊಳಗೊಂಡ ನಿಯೋಗ, ಕಾಂಗ್ರೆಸ್‌ ಸೇರ್ಪಡೆ ಹಾಗೂ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಈಗಾಗಲೇ ನಾವೆಲ್ಲರೂ ಮಾನಸಿಕವಾಗಿ ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದೇವೆ. ಆದಷ್ಟು ಬೇಗ ಕಾಂಗ್ರೆಸ್‌ ಸೇರ್ಪಡೆ ಪ್ರಕ್ರಿಯೆ ನಡೆದರೆ ಮುಂದಿನ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಲು ಸಹಾಯಕವಾಗಲಿದೆ ಎಂದು ಭೇಟಿ ಸಂದರ್ಭದಲ್ಲಿ ಮನವರಿಕೆ ಮಾಡಿಕೊಟ್ಟರು.

Advertisement

ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಭೇಟಿಗೆ ಮೇ ತಿಂಗಳಲ್ಲಿ ಅಥವಾ ಅದಕ್ಕೂ ಮುಂಚೆಯೇ ಸಮಯ ನಿಗದಿ ಮಾಡಲಾಗುವುದು ಎಂದು ದಿಗ್ವಿಜಯ್‌ ಸಿಂಗ್‌ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next