Advertisement

MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

06:57 PM Jul 22, 2024 | Team Udayavani |

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್ ಸಿ ಡಾ.ಸೂರಜ್ ರೇವಣ್ಣ ಅವರಿಗೆ ಸೋಮವಾರ ಜಾಮೀನು ಸಿಕ್ಕಿದೆ.

Advertisement

ಜನ ಪ್ರತಿನಿಧಿಗಳ ವಿಚಾರಣೆಯ ವಿಶೇಷ ನ್ಯಾಯಾಲಯ 27 ವರ್ಷದ ಯುವಕ ಸಲ್ಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 23 ರಂದು ಬಂಧಿತರಾಗಿದ್ದ ಸೂರಜ್ ರೇವಣ್ಣ ಅವರಿಗೆ 2 ಲಕ್ಷ ರೂ ವೈಯಕ್ತಿಕ ಬಾಂಡ್ ಮೇಲೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

“ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒದಗಿಸಬೇಕು ಮತ್ತು ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆಯದೆ ರಾಜ್ಯವನ್ನು ತೊರೆಯಬಾರದು. ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತನನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಅರ್ಜಿದಾರರು ತಿಂಗಳ ಪ್ರತಿ ಎರಡನೇ ಭಾನುವಾರದಂದು ತನಿಖಾಧಿಕಾರಿ (IO) ಮುಂದೆ ಹಾಜರಾಗಬೇಕು. ಆರು ತಿಂಗಳ ಅವಧಿಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಅಥವಾ ಆರೋಪಪಟ್ಟಿ ಸಲ್ಲಿಸುವವರೆಗೆ ಅವರ ಹಾಜರಾಗಬೇಕು ”ಎಂದು ನ್ಯಾಯಾಲಯ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next