Advertisement

ಜೆಡಿಎಸ್‌ ನಾಮಾವಶೇಷ ಅಸಾಧ್ಯ: ದೇವೇಗೌಡ

11:44 PM Jan 05, 2022 | Team Udayavani |

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಜೆಡಿಎಸ್‌ ಶಕ್ತಿ ಕಡಿಮೆಯಾಗಿದ್ದರೂ ಅದನ್ನು ನಾಶಮಾಡಲು ಕಾಂಗ್ರೆಸ್‌ ಅಥವಾ ಬಿಜೆಪಿಗೆ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಸಂಪೂರ್ಣ ನಾಶ ಮಾಡುತ್ತೇವೆ ಅಂತಾ ಕಾಂಗ್ರೆಸ್‌ ಮತ್ತು ಬಿಜೆಪಿಯವರು ಹೇಳಿದ್ದಾರೆ. ನಮ್ಮದೇ ಪಕ್ಷದಲ್ಲಿದ್ದು, ಈಗ ಕಾಂಗ್ರೆಸ್‌ನಲ್ಲಿರುವ ಮಹಾನುಭಾವರೊಬ್ಬರು ಕೂಡ ಮುಂಬರುವ ಚುನಾವಣೆಗೆ ಜೆಡಿಎಸ್‌ ಇರದು ಎಂದು ಹೇಳಿದ್ದಾರೆ. ಆದರೆ, ನಮ್ಮ ನಾಮಾವಶೇಷ ಮಾಡಲು ಯಾರಿಂದಲೂ ಸಾಧ್ಯವಾಗದು ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಡೆದ ನಗರ-ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮುಂಬಯಿ ಕರ್ನಾಟಕದಲ್ಲಿ ಜೆಡಿಎಸ್‌ 50 ಸ್ಥಾನಗಳನ್ನು ಪಡೆದಿದೆ. ಮಂಗಳೂರು, ಉಡುಪಿ ಜಿಲ್ಲೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾ ಧಿಸಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕಿದೆ. ಕಲಬುರಗಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಜಿಲ್ಲೆಯಲ್ಲಿ ಹೆಚ್ಚು ಜೆಡಿಎಸ್‌ ಶಾಸಕರು ಆಯ್ಕೆಯಾಗಿ ಸಚಿವರಾಗಿದ್ದರು. ರಾಜ್ಯದಲ್ಲಿ ಮತ್ತೆ ಸ್ವಂತ ಬಲದ ಮೇಲೆ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ನಾನು ತಿಂಗಳಲ್ಲಿ ಎರಡು ಬಾರಿ ಪ್ರವಾಸ ಮಾಡಲಿದ್ದೇನೆ. ಕುಮಾರಸ್ವಾಮಿ ಕೂಡ ಪ್ರವಾಸ ಮಾಡಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಪೈಲಟ್‌ ತರಬೇತಿ ಕೇಂದ್ರ: ಪ್ರಹ್ಲಾದ್ ಜೋಷಿ

ಮೋದಿ ಪಕ್ಷ ಎನ್ನಬೇಕೋ?
ಇವತ್ತು ಬಿಜೆಪಿಯನ್ನು ಬಿಜೆಪಿ ಎನ್ನಬೇಕೋ ಅಥವಾ ಮೋದಿ ಪಕ್ಷ ಎನ್ನಬೇಕೋ ಗೊತ್ತಿಲ್ಲ. ಬಿಜೆಪಿಗೆ ಪ್ರಧಾನಿ ಮೋದಿ ಹೆಸರನ್ನು ಬಿಟ್ಟರೆ ಬೇರೆ ಅಸ್ತಿತ್ವವೇ ಇಲ್ಲ. ಮುಂದೇನು ಆಗುತ್ತದೋ ನನಗೆ ಗೊತ್ತಿಲ್ಲ. ಇತ್ತ ಕಾಂಗ್ರೆಸ್‌ ಶಕ್ತಿಯೂ ರಾಷ್ಟ್ರ ಮಟ್ಟದಲ್ಲಿ ಕುಂದಿದೆ. ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಮಾತ್ರ ಕಾಂಗ್ರೆಸ್ಸಿನ ಸ್ಥಿರ ಸರಕಾರವಿದೆ. ಪಂಜಾಬ್‌ನಲ್ಲಿ ಸರಕಾರ ಅಸ್ಥಿರವಾಗಿದೆ ಎಂದರು.

Advertisement

ತೃತೀಯ ರಂಗವನ್ನು ಅಧಿಕಾರಕ್ಕೆ ತರಲು ಕೈಲಾದ ಸಹಾಯ ಮಾಡುತ್ತೇನೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿಯೂ ವಿವಿಧ ರಾಜ್ಯಗಳನ್ನು ಸುತ್ತುತ್ತಿದ್ದಾರೆ. ಆದರೂ, ತೃತೀಯ ರಂಗ ರಚನೆ ಕಷ್ಟ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next