Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಕಳೆದ ಚುನಾವಣೆಯಲ್ಲಿ ಅಪಪ್ರಚಾರದಿಂದ ಸೋತಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಯಾರನ್ನೂ ಟೀಕಿಸುವುದು, ಹೀಯಾಳಿಸುವುದು ಬೇಡ, ಬದಲಿಗೆ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಮನವಿ ಮಾಡಿದರು.
Related Articles
Advertisement
ಬಿಜೆಪಿ ವಿರೋಧಿ ಅಲೆ: ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಸ್ವಹಿತಕ್ಕಾಗಿ ರಾಜೀನಾಮೆ ನೀಡಿರುವ ಎಲ್ಲಾ ಕ್ಷೇತ್ರಗಳಲ್ಲೂ ಅವರಿಗೆ ಜನ ವಿರೋಧವಿದೆ. ಕಾಂಗ್ರೆಸ್‌ಗೆ ಜನಾಭಿಪ್ರಾಯವಿದ್ದು, ದೊಡ್ಡ ಅಲೆಯೇ ಎದ್ದಿದೆ. ಇದನ್ನು ಸರಕಾರವೇ ನಡೆಸಿರುವ ಸರ್ವೆ, ಇಂಟಲಿಜನ್ಸ್ ವರದಿಯಿಂದ ಬಹಿರಂಗವಾಗಿದೆ.
ತಾವು ಈ ಚುನಾವಣೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ತಾಲೂಕಿನ ದೊಡ್ಡ ಗುಂಪೊಂದು ಪಕ್ಷ ಸೇರಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯರಾದ ಕಟ್ಟನಾಯಕ, ಸಾವಿತ್ರಿ ಮಂಜು, ತಾಪಂ ಅಧ್ಯಕ್ಷೆ ಪದ್ಮಮ್ಮ, ತಾಲೂಕು ಕಾಂಗ್ರೆಸ್ ಮುಖಂಡರಾದ ನಾರಾಯಣ್, ಶಿರೇನಹಳ್ಳಿ ಬಸವರಾಜು, ಜಯರಾಮ್ ಇತರರಿದ್ದರು.
ಇಂದು ನಾಮಪತ್ರ ಸಲ್ಲಿಕೆ: ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಾವು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳೇ ತಮಗೆ ಶ್ರೀರಕ್ಷೆಯಾಗಿದೆ. ಬುಧವಾರ ಬೆಳಗ್ಗೆ ಬಿಳಿಕೆರೆಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು.
ಬಳಿಕ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಮತ್ತು ಮಾಜಿ ಶಾಸಕ ದಿ.ಚಿಕ್ಕಮಾದು ಸಮಾಧಿಗೆ ನಮನ ಸಲ್ಲಿಸಿದ ನಂತರ ಕನ್ಯಕಾಪರಮೇಶ್ವರಿ ದೇವಾಲಯ, ಸಾಯಿಬಾಬ ಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರ ಬೆಳಗ್ಗೆ 10ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಗುವುದು. ನಂತರ ತಾಲೂಕು ಕಚೇರಿಗೆ ತೆರಳಿ 11 ರಿಂದ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ತಿಳಿಸಿದರು.