Advertisement

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

12:46 AM May 08, 2024 | Team Udayavani |

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಸೂಕ್ತ ತನಿಖೆ ನಡೆಸಬೇಕು. ಜತೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಮಂಗಳವಾರ ಬೆಂಗಳೂರು ಸಹಿತ ರಾಜ್ಯದ ಹಲವೆಡೆ ಬೃಹತ್‌ ಪ್ರತಿಭಟನೆ ನಡೆಸಿದರು.

Advertisement

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದು, ಕೂಡಲೇ ಅವರನ್ನು ಸಂಪುಟದಿಂದ ಕೈಬಿಡಬೇಕು. ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ತತ್‌ಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಬೆಂಗಳೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಕೋಲಾರ ಸಹಿತ ಹಲವೆಡೆ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು ಡಿ.ಕೆ.ಶಿವಕುಮಾರ್‌, ಎಲ್‌.ಆರ್‌.ಶಿವರಾಮೇ ಗೌಡರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಚನ್ನಪಟ್ಟಣದಲ್ಲಿ ಜೆಡಿಎಸ್‌-ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ಇಂದು ರಾಜ್ಯಾದ್ಯಂತ
ಜೆಡಿಎಸ್‌ ಪ್ರತಿಭಟನೆ
ಪೆನ್‌ಡ್ರೈವ್‌ ಸಹಿತ ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಇಂದು (ಮೇ 8) ರಾಜ್ಯಾದ್ಯಂತ ಜೆಡಿಎಸ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಮೈಸೂರಿನಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next