ಬೆಂಗಳೂರು: ಜೆಡಿಎಸ್ ಪಂಚರತ್ನ ರಥಯಾತ್ರೆ ಮುಳಬಾಗಿಲಿನ ಕೂಡುಮಲೆಯಿಂದ ಶುಕ್ರವಾರ ಆರಂಭ ವಾಗಲಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಎಲ್ಲ ರಥಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡುವರು.
Advertisement
ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿ ನಡೆಯುವ ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗುವರು. ರಾತ್ರಿ ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡುವರು. ನ. 1ರಂದೇ ರಥ ಯಾತ್ರೆ ಆರಂಭವಾಗಿತ್ತು. ಮಳೆಯ ಕಾರಣಕ್ಕೆ ಮುಂದೂಡ ಲಾಗಿತ್ತು.a