ಬೆಂಗಳೂರು: ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಕೆಲವು ಜೆಡಿಎಸ್ ಶಾಸಕರ ಮನ ವೊಲಿಸಿ ಅವರನ್ನು ಪಕ್ಷದಲ್ಲೇ ಹಿಡಿದಿಟ್ಟು ಕೊಳ್ಳಲು ಮುಂದಾಗಿರುವ ಎಚ್.ಡಿ. ಕುಮಾರಸ್ವಾಮಿ, ಈ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಶಾಸಕ ಸಿ.ಎಸ್. ಪುಟ್ಟರಾಜು ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರಿಗೆ ವಹಿಸಿದ್ದಾರೆ.
ಶಾಸಕರಾದ ಜಿ.ಟಿ. ದೇವೇಗೌಡ, ಶಿವಲಿಂಗೇ ಗೌಡ, ಎ.ಟಿ. ರಾಮ ಸ್ವಾಮಿ, ಗುಬ್ಬಿ ಶ್ರೀನಿವಾಸ್, ಮಾಜಿ ಶಾಸಕ ವೈಎಸ್‌ವಿ ದತ್ತಾ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ.
ಜನತಾ ಜಲಧಾರೆ ಕಾರ್ಯಕ್ರಮದಲ್ಲೂ ಈ ಶಾಸಕರು ಸಕ್ರಿಯವಾಗಿರಲಿಲ್ಲ. ಈಗ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕರ ಮನವೊಲಿಸಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಕುಮಾರಸ್ವಾಮಿ ಸ್ವಾಮಿ ಮುಂದಾಗಿದ್ದರೆ.
ಅಲ್ಲದೇ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಹಾಕಲು ಜೆಡಿಎಸ್ ನಿರ್ಧರಿಸಿರುವುದರಿಂದ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ.
ಬಿಜೆಪಿ ಯವರು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಜೆಡಿಎಸ್ ಶಾಸಕರನ್ನು ಸೆಳೆಯುವ ಯತ್ನಗಳು ನಡೆಯಬಹುದು. ಅದನ್ನು ತಪ್ಪಿಸಲು ಅತೃಪ್ತರ ಮನವೊಲಿಕೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.