Advertisement
ಮೈಸೂರಿನಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ, ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Related Articles
ಮಂಡ್ಯದಲ್ಲಿ ಮಾಜಿ ಶಾಸಕ ಕೆ. ಸುರೇಶ್ ಗೌಡ ಮಾತನಾಡಿ, ಜಮೀರ್ ಅವರು ಎಚ್.ಡಿ. ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಮಾತನಾಡುವ ಮೂಲಕ ಜನಾಂಗೀಯ ಘರ್ಷಣೆಗೆ ಕಾರಣವಾಗುವ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು. ನಾವು ಹಿಂದೂಗಳು ಪೂಜೆ ಮಾಡುವ ದೇವರ ಮೂರ್ತಿಗಳು ಸಹ ಕಪ್ಪು. ಇದಕ್ಕೆ ಸಾರ್ವಜನಿಕರು ತಕ್ಕ ಉತ್ತರ ಕೊಡುತ್ತಾರೆಂದು ಹೇಳಿದರು.
Advertisement
ಒಮ್ಮೆಯೂ ಜಮೀರ್ಗೆ ಎಚ್ಡಿಕೆ ಕುಳ್ಳ ಎಂದಿಲ್ಲ
ಮಂಡ್ಯ: ದೇವರಲ್ಲಿ ಪ್ರಮಾಣ ಮಾಡುತ್ತೇನೆ. ಒಂದು ದಿನ ಕೂಡ ಕುಮಾರಸ್ವಾಮಿ ಅವರು ಜಮೀರ್ ಅಹಮದ್ ಅವರನ್ನು ಕುಳ್ಳ ಎಂದು ಕರೆದಿಲ್ಲ. ಅದಕ್ಕೆ ನಾನೇ ಸಾಕ್ಷಿ ಎಂದು ಮಾಜಿ ಶಾಸಕ ಕೆ. ಅನ್ನದಾನಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಚಿವ ಜಮೀರ್ ಅಹಮದ್ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರನ್ನು ಅವಮಾನಿಸಿದ್ದಾರೆ. ಅದನ್ನು ನಾವು ಖಂಡಿಸುತ್ತೇವೆ. ಜಮೀರ್ಗೆ ಕನಿಷ್ಠ ಮಾತನಾಡುವ ಸೌಜನ್ಯ ಗೊತ್ತಿಲ್ಲ ಎಂದು ಹೇಳಿದರು. ಸಂಪುಟದಿಂದ ಜಮೀರ್ ಕೈಬಿಡಿ: ಒಕ್ಕಲಿಗರ ಸಂಘ ಆಗ್ರಹ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಮಹಾಸಭಾವು ಮುಖ್ಯಮಂತ್ರಿ ಜಮೀರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲ ಕೃಷ್ಣ ಆಗ್ರಹಿಸಿದ್ದಾರೆ. ರಾಜ್ಯ ಒಕ್ಕಲಿಗ ಮಹಾಸಭಾ ಕೂಡ ಸಚಿವ ಜಮೀರ್ ಹೇಳಿಕೆಯನ್ನು ಖಂಡಿಸಿದೆ.