Advertisement

ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ

05:14 PM Feb 23, 2023 | Team Udayavani |

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಭಟ್ಕಳದಲ್ಲಿ ಮಾಂಸ ತಿಂದು ದೇವಾಲಯಕ್ಕೆ ಹೋದ ಆರೋಪಕ್ಕೆ ಸಂಬಂಧಿಸಿ ಗುರುವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಆಕ್ರೋಶ ಹೊರ ಹಾಕಿದರು. ತೊಲಗಲಿ, ತೊಲಗಲಿ ಸಿ.ಟಿ.ರವಿ ತೊಲಗಲಿ ಎಂದು ಘೋಷಣೆ ಕೂಗಿದರು. ಹಿರಿಯರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಆಕ್ರೋಶ ಹೊರ ಹಾಕಿದರು.

ಶಾಸಕ ಸಿ.ಟಿ. ರವಿ ಹೇಳುವುದು ಒಂದು, ಮಾಡುವುದು ಎಂದರು. ಹಿರಿಯ ರಾಜಕಾರಣಿಗಳಿಗೆ ಗೌರವ ಕೊಡಲಿಲ್ಲ ಅಂದರೆ ಜನರು ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next