Advertisement

ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್‌ ಬೃಹತ್‌ ಪ್ರತಿಭಟನೆ

12:58 PM Jun 26, 2021 | Team Udayavani |

ಚಿತ್ರದುರ್ಗ: ಜನರಿಗೆ ನೀಡಿದ್ದ ಆಶ್ವಾಸನೆ ಈಡೇರಿಸದೆ, ಅಗತ್ಯ ವಸ್ತಗಳ ಬೆಲೆ ಏರಿಕೆ ಮಾಡಿ ಜನವಿರೋಧಿ  ನೀತಿ ಅನುಸರಿಸುತ್ತಿರುವ ಕೇಂದ್ರ ಮತ್ತು ರಾಜ್ಯಸರ್ಕಾರಗಳ ವಿರುದ್ಧ ಜೆಡಿಎಸ್‌ ಜಿಲ್ಲಾಘಟಕದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.

Advertisement

ಜೆಡಿಎಸ್‌ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ನೂರಾರು ಜೆಡಿಎಸ್‌ ಕಾರ್ಯಕರ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ, 2014 ರ ಲೋಕಸಭಾ ಚುನಾವಣೆಪೂರ್ವದಲ್ಲಿ ಪೊಳ್ಳು ಆಶ್ವಾಸನೆ ನೀಡಿ ಆಯ್ಕೆಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಈಗ ಎರಡನೇ ಅವಧಿಯಲ್ಲೂ ತಾವು ನೀಡಿದ್ದ ಭರವಸೆ ಈಡೇರಿಸದೆ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ವಿದ್ಯುತ್‌ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನೇತೃತ್ವದ ಸರ್ಕಾರ ಕೋವಿಡ್‌ ಲಾಕ್‌ಡೌನ್‌ ಸಂಕಷ್ಟದ ಪರಿಸ್ಥಿತಿಯಲ್ಲಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಿದೆ. ರಾಮ ಮಂದಿರ, ಧರ್ಮವನ್ನು ಮುಂದಿಟ್ಟುಕೊಂಡು ಭಾವನಾತ್ಮಕ ರಾಜಕಾರಣ ಮಾಡುತ್ತಿರುವ ಬಿಜೆಪಿ ಜಾತಿ-ಧರ್ಮಗಳ ನಡುವೆ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ವಿದೇಶಗಳಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಹೇಳಿ ದೇಶದ ಜನರನ್ನು ನಂಬಿಸಿ ವಂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಉದ್ಯೋಗ ಕೇಳಿದ ಯುವಕರಿಗೆ ಪಕೋಡಾ ಮಾರಿಎಂದು ಹೇಳಿದ್ದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

Advertisement

ಕೋವಿಡ್‌ ಲಾಕ್‌ಡೌನ್‌ನಿಂದ ಹೈರಾಣಾಗಿರುವ ಬಡವರು, ಕಾರ್ಮಿಕರು, ಶ್ರಮಿಕರು, ಮಧ್ಯಮ ವರ್ಗದವರ ಜತೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಳಂಬವಾಗಿವೆ. ಕೂಡಲೇ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ದಿನಸಿ ಪದಾರ್ಥಗಳ ಬೆಲೆ ಜನಸಾಮಾನ್ಯರ ಕೈಗೆಟುವಂತೆ ಮಾಡಬೇಕು. ಕೋವಿಡ್‌ನಿಂದ ಮೃತಪಟ್ಟವರ

ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರ ನೀಡಬೇಕು. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಭದ್ರಾ ಮೇಲ್ದಂಡೆ ಯೋಜನೆಯನ್ನುರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಹಣ ಬಿಡುಗಡೆಗೊಳಿಸಿ ನಿಗ ದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಜಿಲ್ಲೆಗೆ ನೀರು ಹರಿಸಿ ರೈತನ ಬದುಕು ಹಸನು ಮಾಡಬೇಕು. ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್‌, ಜಿಪಂ ಮಾಜಿ ಅಧ್ಯಕ್ಷ ಎಂ.ಜಯಣ್ಣ, ಮುಖಂಡರಾದ ಗೋಪಾಲಸ್ವಾಮಿ ನಾಯಕ, ಪ್ರತಾಪ್‌ ಜೋಗಿ, ಸಣ್ಣತಿಮ್ಮಪ್ಪ, ಜೆ.ಬಿ.ಶೇಖರ್‌, ಎಚ್‌.ವೀರಣ್ಣ, ಪಿ.ತಿಪ್ಪೇಸ್ವಾಮಿ, ಪಟೇಲ್‌ ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಗಣೇಶ್‌ಕುಮಾರ್‌,ಹನುಮಂತರಾಯಪ್ಪ, ಶಿವಪ್ರಸಾದ್‌ಗೌಡ,ಶಂಕರ್‌ಮೂರ್ತಿ, ಕಿರಣ್‌, ಮಲ್ಲಿಕಾರ್ಜುನ,ಲಲಿತ ಕೃಷ್ಣಮೂರ್ತಿ, ಗೀತ, ರಾಧಮ್ಮ, ಯೋಗೇಶ್‌, ನಿಶಾನಿ ಶಂಕರ್‌, ಪ್ರಸನ್ನ,ನಸ್ರುಲ್ಲಾ, ಸಲಾವುದ್ದೀನ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next