ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವುದರಿಂದ ಸಾಮಾನ್ಯ ಜನರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಬಡವರು ಬದುಕುವುದೇ ತುಂಬಾ ಕಷ್ಟವಾಗಿದೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪೂರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಕೇಂದ್ರ ರಾಜ್ಯ ಸರಕಾರಗಳ ಜನವಿರೋ ನೀತಿ ಖಂಡಿಸಿ ನಡೆಸಿದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಗತ್ಯವಸ್ತುಗಳ ಬೆಲೆಗಳು ದಿನ ದಿನದಿಂದ ಏರಿಕೆ ಮಾಡುತ್ತಿರುವುದರಿಂದ ಬಡವರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಅಧಿಕಾರಿ ಅವಧಿಯಲ್ಲಿ ಬಡವರಿಗೆ ಸಾಕಷ್ಟು ಜನಪರ ಯೋಜನೆ ಜಾರಿಗೊಳಿಸಿರುವುದನ್ನು ಜನರು ಮರೆಯುವಂತಿಲ್ಲ ಎಂದರು.
ತಾಲೂಕ ಜೆಡಿಎಸ್ ಅಧ್ಯಕ್ಷ ರವಿಶಂಕರೆಡ್ಡಿ ಮುತ್ತಂಗಿ ಮಾತನಾಡಿ, ಅಡುಗೆ ಅನಿಲ ಮತ್ತು ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಿಂದ ಜನರು ತೊಂದರೆ ಪಡಬೇಕಾಗಿದೆ ಕೂಡಲೇ ಸರಕಾರ ಬೆಲೆ ಏರಿಕೆಯನ್ನು ಇಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಿಯಾಜ್ ಅಲಿ, ರಾಧಾಕೃಷ್ಣ ಹೊಸಮನಿ, ರಾಜಕುಮಾರ ಐನೋಳಿ, ಹಣಮಂತ ಪೂಜಾರಿ, ಸಿದ್ದಪ್ಪ ಬುಬಲಿ, ವಿಷ್ಣುಕಾಂತ ಮೂಲಗೆ, ಗೌರಿಶಂಕರ ಸೂರವಾರ, ರಾಹುಲ್ ಯಾಕಾಪೂರ, ಮಲ್ಲಿಕಾರ್ಜುನ ಪೂಜಾರಿ, ಸುರೇಂದ್ರ ಶಿವರೆಡ್ಡಿಪಳ್ಳಿ, ನರಸಿಂಹಲು ಇನ್ನಿತರರು ಭಾಗವಹಿಸಿದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರೇಡ್ -2 ತಹಶೀಲ್ದಾರ್ ವೆಂಕಟೇಶ ದುಗ್ಗನ್ ಅವರಿಗೆ ಸಲ್ಲಿಸಿದರು.